Advertisement
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಶ್ರೀಗಳನ್ನು ಕೆಳಗಿಳಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಹಾಗೂ ಮಠದ ಆಡಳಿತದಲ್ಲಿ ನಡೆದಿದೆ ಎನ್ನಲಾದ ಅವ್ಯಹವಾರಗಳ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಎದುರ್ಕಳ ಈಶ್ವರ ಭಟ್, ಎ.ಕೆ. ಜೈಕೃಷ್ಣ ಸೇರಿ 6 ಮಂದಿ 2016ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ ಈ ನಿಲುವು ವ್ಯಕ್ತಪಡಿಸಿದೆ.
Related Articles
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ಶಾಸನಸಭೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಆದರೆ, ಸಂವಿಧಾನದ ಪರಿಚ್ಛೇದ 226ರ ಅಡಿಯಲ್ಲಿ ನ್ಯಾಯಾಲಯ ತನ್ನ ಪರಮಾಧಿಕಾರವನ್ನು ಬಳಸಿ, ಮಠಗಳ ಆಡಳಿತ ನಿಯಂತ್ರಣಕ್ಕಾಗಿ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ. ಮಠಗಳು ಹಾಗೂ ಅವುಗಳಿಗೆ ಹೊಂದಿಕೊಂಡ ದೇವಾಲಯಗಳು ಮಠಾಧಿಪತಿಗಳಿಂದ ನಿರ್ವಹಿಸಲ್ಪಡುವುದರಿಂದ ಶಾಸನಸಭೆ ಅವುಗಳನ್ನು ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಕಾಯ್ದೆ-1997ರ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಆದಾಗ್ಯೂ ಅರ್ಜಿದಾರರಿಗೆ ಪರ್ಯಾಯ ಪರಿಹಾರ ಪಡೆಯಲು ಸಿಪಿಸಿ ಸೆಕ್ಷನ್ 92ರ ಅಡಿಯಲ್ಲಿ ಅವಕಾಶವಿದೆ. ಆದ್ದರಿಂದ, ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.
Advertisement