Advertisement
ನಾಲ್ವರು ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ.
ಮುಂಬೈ ಪೊಲೀಸರ ಪ್ರಕಾರ, ಈ ಗ್ಯಾಂಗ್ ಪಾಕಿಸ್ತಾನದ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರಗಳನ್ನು ಪಡೆಯುವ ಯೋಜನೆಯನ್ನು ಹೊಂದಿತ್ತು, ಅದು ವಿಫಲವಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಈ ನಾಲ್ವರು ಶೂಟರ್‌ಗಳು ಸಲ್ಮಾನ್ ಖಾನ್ ಮೇಲೆ ಎಕೆ-47 ಮತ್ತು ಎಂ16 ನಂತಹ ಆಯುಧಗಳಿಂದ ದಾಳಿ ನಡೆಸಲು ಯೋಜಿಸಿದ್ದರು ಎನ್ನಲಾಗಿದೆ.
Related Articles
ಈ ವರ್ಷದ ಏಪ್ರಿಲ್ 14 ರಂದು ಲಾರೆನ್ಸ್ ಗ್ಯಾಂಗ್‌ಗೆ ಸಂಬಂಧಿಸಿದ ಇಬ್ಬರು ಶೂಟರ್‌ಗಳು ಸಲ್ಮಾನ್ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಮುಂಜಾನೆ, ಇಬ್ಬರು ಅಪರಿಚಿತರು ಬಾಂದ್ರಾದ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಗಾಳಿಯಲ್ಲಿ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯ ಹೊಣೆಯನ್ನು ಲಾರೆನ್ಸ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದ. ಇದಾದ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಹಲವು ಮಂದಿಯನ್ನು ಬಂಧಿಸಲಾಗಿತ್ತು ಇದಾದ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ಮೆನ್ನೆಲೆಗೆ ಬಂದಿದೆ.
Advertisement
ಇದನ್ನೂ ಓದಿ: Video: ಮತ್ತೆ ವಿವಾದದಲ್ಲಿ ಬಾಲಯ್ಯ: ನಟಿ ಅಂಜಲಿ ಹಿಂಭಾಗ ಮುಟ್ಟಿದ ವಿಡಿಯೋ ವೈರಲ್