ಬರೇಲಿ (ಯುಪಿ): ಇಲ್ಲಿನ ಬರಾದರಿ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಕೀಲನೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ್ದು,ವಕೀಲ ಗೋವಿಂದ್ ಅಲ್ಲಿಗೆ ಬಂದು ಬಾಲಕಿಯನ್ನು ತನ್ನ ಕಚೇರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.
ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಕೀಲ ಬಾಲಕಿಗೆ ಬೆದರಿಕೆ ಹಾಕಿದ್ದಾನೆ.
ಘಟನೆ ಬಳಿಕ, ಹುಡುಗಿ ಮನೆಗೆ ತಲುಪಿ ತನ್ನ ಮೇಲಾಗಿರುವ ದೌರ್ಜನ್ಯದ ಕುರಿತು ಚಿಕ್ಕಮ್ಮನಿಗೆ ತಿಳಿಸಿದ್ದು, ಬಳಿಕ ಆಕೆಯ ತಂದೆ ಬಾರಾದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.