ನವ ದೆಹಲಿ : ದೆಹಲಿಯ ನಂಗಲ್ ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ವಿವಾದವೊಂದನ್ನು ತನ್ನ ಮೈ ಮೇಲೆ ಎಳೆದುಕೊಂಡಿದ್ದಾರೆ.
ದೆಹಲಿಯ ನಂಗಲ್ ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ವಕೀಲ ವಿನೀತ್ ಜಿಂದಾಲ್, ವಕೀಲರು, ತಮ್ಮ ದೂರಿನಲ್ಲಿ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ, ಸಂತ್ರಸ್ತೆಯ ತಂದೆ ತಾಯಿಯವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆಂದು ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : ಜಮೀರ್ ಅಹಮದ್, ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ: ಐಎಂಎ ನಂಟು?
ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಸೆಕ್ಷನ್ 23, ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, ಭಾರತೀಯ ದಂಡ ಸಂಹಿತೆ (ಐಪಿಸಿ) 228 ಎ ಸೆಕ್ಷನ್ 23 ರ ಅಡಿಯಲ್ಲಿ ರಾಹುಲ್ ಗಾಂಧಿತವರು ಫೋಟೋ ಹಂಚಿಕೊಂಡಿದ್ದು ಅಪರಾಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಿಸಿ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು, ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ ಸಿ ಪಿ ಸಿ ಆರ್) ಕೂಡ ಮಂಗಳವಾರ ಟ್ವಿಟರ್ ಇಂಡಿಯಾಕ್ಕೆ ನೋಟಿಸ್ ನೀಡಿ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆಯನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ.
ನಿನ್ನೆ(ಬುಧವಾರ, ಆಗಸ್ಟ್ 4) ದೆಹಲಿಯ ನಂಗಲ್ ನಲ್ಲಿ ಅತ್ಯಾಚಾರಕ್ಕೊಳಪಟ್ಟ ಅಪ್ರಾಪ್ತ ಬಾಲಕಿಯ ಪೋಷಕರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದರು. ಮಾತ್ರವಲ್ಲದೇ, ಅವರೊಂದಿಗಿನ ಫೋಟೋವನ್ನು ಕೂಡ ತಮ್ಮ ಟ್ವೀಟರ್ ಖಾತೆಯ ಮೂಲಕ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ : ಮೇಕೆದಾಟು ವಿಚಾರದಲ್ಲಿ ರಾಜಿ ಇಲ್ಲ, ಅಣ್ಣಾಮಲೈ ಉಪವಾಸ ಹೋರಾಟಕ್ಕೆ ಬೊಮ್ಮಾಯಿ ತಿರುಗೇಟು