ಬೆಂಗಳೂರು: ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ವಕೀಲೆಯೊಬ್ಬರು ಮಸಿ ಬಳಿದ ಘಟನೆ ಗುರುವಾರ ನಡೆದಿದೆ.
ನಗರದ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಪ್ರಕರಣವೊಂದರ ವಿಚಾರಣೆಗೆಂದು ಭಗವಾನ್ ಅವರು ಇಂದು ಕೋರ್ಟ್ ಗೆ ಆಗಮಿಸಿದ್ದರು. ವಿಚಾರಣೆ ಬಳಿಕ ಹೊರಬಂದಾಗ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದಾರೆ.
ಇದನ್ನೂ ಓದಿ:ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಸಚಿವ ಕೋಟ ಸ್ಪಷ್ಟನೆ
ಸದ್ಯ ಘಟನೆಯ ಕುರಿತು ಸಾಹಿತಿ ಭಗವಾನ್ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ವಿನಯ್ ಕುಲಕರ್ಣಿ, ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ