Advertisement

ಸವದಿ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ: ಲಖನ್ ಜಾರಕಿಹೊಳಿ ಬಾಂಬ್

02:33 PM Jan 27, 2022 | Team Udayavani |

ಬೆಳಗಾವಿ : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿರುವ ಬೆಳಗಾವಿ ರಾಜಕಾರಣಕ್ಕೆ ಈ ಹೇಳಿಕೆಯಿಂದ ಮಹತ್ವದ ತಿರುವು ಲಭಿಸಿದೆ.

Advertisement

ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಎಂಎಲ್​ಸಿ ಲಖನ್ ಜಾರಕಿಹೊಳಿ ಮಾತನಾಡಿ, ಲಕ್ಷ್ಮಣ ಸವದಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ.

ಸವದಿ, ಡಿಕೆಶಿ ಮಾತನಾಡಿದ ಮೊಬೈಲ್ ನಂಬರ್ ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಲಕ್ಷ್ಮಣ ಸವದಿ ಬೇರೆ ನಂಬರ್ನಿಂದ ಡಿಕೆಶಿ ಜೊತೆ ಮಾತುಕತೆ ನಡೆಸಿದ್ದಾರೆ. ಸೋತ ನಾಯಕರೇ ಡಿಕೆಶಿ ಜತೆ ಸಂಪರ್ಕದಲ್ಲಿರುವವರು ಎಂದು ಲಖನ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್​, ಬಾಲಚಂದ್ರ ಜಾರಕಿಹೊಳಿಗೆ 16 ಅಲ್ಲ, 20 ಶಾಸಕರನ್ನು ಕರೆತರುವ ಶಕ್ತಿ ಇದೆ. ರಮೇಶ್​ ಜಾರಕಿಹೊಳಿ ಬೈಲಹೊಂಗಲ, ಖಾನಾಪುರ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದರು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next