ವಿಜಯಪುರ: ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ನೀಡದಿದ್ದರೆ ನಾನೂ ಸ್ಪರ್ಧಿಸುವುದಿಲ್ಲ ಎಂದಿರುವ ರಮೇಶ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಲಾರೆ. ಪಕ್ಷದ ಆದೇಶವೇ ಅಂತಿಮ, ಅದಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದು ಮಾಜಿ ಡಿಸಿಎಂ, ಮೇಲ್ಮನೆ ಶಾಸಕ ಲಕ್ಷ್ಮಣ ಸವದಿ ಹೇಳಿದರು.
Advertisement
ಮಂಗಳವಾರ ಜಿಲ್ಲೆಯ ಆಲಮಟ್ಟಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ಧಾರ ಏನಿದ್ದರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.
ಇದನ್ನೂ ಓದಿ:ಕರಾಚಿ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಾದ ದೆಹಲಿ- ದೋಹಾ ವಿಮಾನ