Advertisement

ಸಹೋದರನ ಪುತ್ರನ ಹುಟ್ಟುಹಬ್ಬದ ಪ್ರಯುಕ್ತ ಹುಲಿ ದತ್ತು ಪಡೆದ ಲಕ್ಷ್ಮೀ ಹೆಬ್ಬಾಳಕರ್

02:33 PM Jun 14, 2021 | Team Udayavani

ಬೆಳಗಾವಿ: ತಮ್ಮ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.

Advertisement

ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಅವರು ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು.

ಇದನ್ನೂ ಓದಿ:ಡಿ.ಕೆ.ಶಿವಕುಮಾರ್ ಏನು ಮಾತನಾಡ್ತಾರೆ ಅನ್ನೋ ಜ್ಞಾನ ಅವರಿಗೇ ಇಲ್ಲ : ಈಶ್ವರಪ್ಪ

ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೌರ್ಯ ಹುಲಿಯನ್ನು ದತ್ತು ಪಡೆದಿದ್ದೇನೆ ಎಂದು ಹೇಳಿದರು.

ಈ ಹುಲಿಯ ಆರೈಕೆಯ ಸಲುವಾಗಿ ಪ್ರಾರಂಭದಲ್ಲಿ ಒಂದು ಲಕ್ಷ ರೂ,ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ಎಡೆ ಮಾಡಿಕೊಡಬೇಕು ಎಂದು ವಿನಂತಿಸಿದರು.

Advertisement

ಚನ್ನರಾಜ ಹಟ್ಟಿಹೊಳಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next