Advertisement

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

08:42 PM Dec 19, 2024 | Team Udayavani |

ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳೆಕೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು ಬಿಜೆಪಿ ನಾಯಕ, ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ(ಡಿ19) ಪೊಲೀಸರು ಬಂಧಿಸಿದ್ದಾರೆ.

Advertisement

ಸಚಿವೆ ಬೆಂಬಲಿಗರು ದೂರು ದಾಖಲಿಸಿದ ಬಳಿಕ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಸುವರ್ಣ ಸೌಧದಲ್ಲೇ
ಸಿ.ಟಿ.ರವಿ ಅವರನ್ನು ವಶಕ್ಕೆ ಪಡೆದು ಭಾರೀ ಭದ್ರತೆಯಲ್ಲಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಬಂಧನದ ವೇಳೆ ಇಬ್ಬರು ಐಪಿಎಸ್ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ಬೆಂಗಾವಲಾಗಿ ಕಳುಹಿಸಲಾಗಿತ್ತು.

ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆಗೆ ವಿರುದ್ಧ ಅಶ್ಲೀಲತೆ ಪ್ರದರ್ಶನ, ಅವಮಾನಿಸುವ ಉದ್ದೇಶದ ಸನ್ನೆ, ಪದ ಬಳಕೆ ಮತ್ತು ಕ್ರಿಯೆ, ಲೈಂಗಿಕ ಟೀಕೆ ಅಡಿಯಲ್ಲಿ ಎಫ್​​ಐಆರ್​ ದಾಖಲು ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next