Advertisement

ಸತೀಶ ಜಾರಕಿಹೊಳಿ 3 ದಶಕಗಳ ಸಾಧನೆ ನೋಡಿ ಮತ ಹಾಕಿ : ಶಾಸಕಿ ಲಕ್ಷ್ಮಿ ಹೆಬ್ಟಾಳಕರ

07:29 PM Apr 01, 2021 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮತ್ತು ಅಭ್ಯರ್ಥಿ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿ ಮತ ಯಾಚಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಟಾಳಕರ, ನಮ್ಮ ಅಭ್ಯರ್ಥಿ ಸತೀಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿ. ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಈಗ ಅವರನ್ನು ಗೆಲ್ಲಿಸುವ ಮೂಲಕ ದೆಹಲಿಗೆ ಹೊಸ ಸಂದೇಶ ರವಾನಿಸಬೇಕಿದೆ ಎಂದರು.

ಸತೀಶ ಜಾರಕಿಹೊಳಿ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದಂತೆ ಈಗ ನಡೆಯುವ ಲೋಕಸಭಾ ಉಪ ಚುನಾವಣೆಯಲ್ಲೂ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಕ್ಷೇತ್ರದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖಂಡರಾದ ಯುವರಾಜ ಕದಂ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next