ಬೆಳಗಾವಿ: ಸಮೀಪದ ದೇಸೂರ ಗ್ರಾಮಕ್ಕೆ ಭೆಟ್ಟಿ ನೀಡಿದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚಿನ ಮಹಿಳೆಯರ ಜೊತೆ ಸಂವಾದ ನಡೆಸಿದರು.
ಪ್ರತಿಯೊಬ್ಬ ಮಹಿಳೆಯರ ಆರೋಗ್ಯದ ಬಗ್ಗೆ ವಿಚಾರಿಸಿ ಅವರ ಕೌಟುಂಬಿಕ ಪರಿಸ್ಥಿತಿಗಳನ್ನು ಆಲಿಸಿದರು. ಕೆಲಸದ ಸ್ಥಳದಲ್ಲಿ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು.
ಬಳಿಕ ಇಟ್ಟಿಗೆ ಭಟ್ಟಿಗೆ ತೆರಳಿದ ಶಾಸಕಿ ಹೆಬ್ಟಾಳಕರ ಮಹಿಳೆಯರು ಪಡುತ್ತಿರುವ ಕಷ್ಟವನ್ನು ಕಣ್ಣಾರೆ ಕಂಡು ಸರಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ :ಜಾನಪದ ಕಲೆ ಪ್ರೋತ್ಸಾಹಿಸಿ: ಪಾಟೀಲ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸ್ನೇಹಾ ಕುಂಬಾರ, ಸಂತೋಷ ಮರಗಾಳಿ, ಸತೀಶ ಚವ್ಹಾಣ, ಗಣಪತ್ ಪಾಟೀಲ, ಸಂಕೇತ ಪಾಟೀಲ, ವಿದ್ಯಾ ಮನವಾಡಕರ್, ನಿಖೀತಾ ಸುತಾರ, ಕವಿತಾ ಗುರವ, ಭರಮಾ ಸುತಾರ, ಶೋಭಾ ನಂದ್ಯಾಳಿ ಮುಂತಾದವರು ಉಪಸ್ಥಿತರಿದ್ದರು.