Advertisement
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಮೂರು ಕ್ಷೇತ್ರಗಳಷ್ಟೇ ಅಲ್ಲದೆ, 28 ಕ್ಷೇತ್ರ ಜತೆಗೆ ರಾಜ್ಯಾದ್ಯಂತ ಮುಸ್ಲಿಂ, ದಲಿತ, ಹಿಂದುಳಿದ ವರ್ಗ ಸಮುದಾಯಗಳ ಮತ ಷಡ್ಯಂತ್ರ ರೂಪಿಸಿ ತೆಗೆದು ಹಾಕಲಾಗಿದೆ. ಹೀಗಾಗಿಯೇ ನಾವು ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದ್ದೇವೆ ಎಂದು ಹೇಳಿದರು.
Related Articles
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
Advertisement
ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಮರು ಪರಿಶೀಲನೆ ನಡೆಸಬೇಕು. 7 ಎ ನಮೂನೆ ಇಲ್ಲದೆ ಹೆಸರು ತೆಗೆದುಹಾಕಲಾಗಿದೆ. ಎರಡೆರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ ತೆಗೆದು ಹಾಕಲಿ. ನಮ್ಮ ಅಭ್ಯಂತರವಿಲ್ಲ. ಆದರೆ, ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಸಾವಿರಾರು ಹೆಸರು ತೆಗೆದುಹಾಕಿದ್ದು ಇದರ ಮರು ಪರಿಶೀಲನೆ ಮಾಡಬೇಕು.– ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮತದಾರರ ಮಾಹಿತಿ ಕಳುವು ಪ್ರಕರಣದಲ್ಲಿ ಸರ್ಕಾರ ಮುಕ್ತ ರೀತಿಯ ತನಿಖೆ ಮಾಡಿಸುತ್ತಿದೆ. ಯಾವುದೇ ಸಂಸ್ಥೆಯಾಗಲಿ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವುಗಳನ್ನು ಶಿಕ್ಷೆಗೆ ಒಳಪಡಿಸಲೆಂದೇ ಅವುಗಳನ್ನು ತನಿಖೆಗೆ ಆದೇಶ ಮಾಡಿರುವುದು. ಈಗಾಗಲೇ ಹಲವಾರು ಜನರ ವಿರುದ್ಧ ಕ್ರಮಕೈಗೊಂಡು ಬಂಧಿಸಲಾಗಿದೆ. ಚುನಾವಣಾ ಆಯೋಗ ಮುಖ್ಯವಾಗಿ ಡಿಲೀಟ್ ಆಗಿರುವ ಪ್ರಕರಣಗಳನ್ನು ಹಾಗೂ ಮತಪಟ್ಟಿಯನ್ನು ಮತ್ತೂಮ್ಮೆ ಪರಿಷ್ಕರಣೆ ಮಾಡಲು ತೀರ್ಮಾನಿಸಿದೆ. ಇದನ್ನು ಸ್ವಾಗತಿಸುತ್ತೇವೆ.
– ಬಸವರಾಜ ಬೊಮ್ಮಾಯಿ ಸಿಎಂ