Advertisement

ನಾಯಕ ಸಮುದಾಯ ಪ್ರಗತಿಗೆ ಒತ್ತು

12:42 PM Apr 25, 2018 | Team Udayavani |

ತಿ.ನರಸೀಪುರ: ಪರಿವಾರ ಮತ್ತು ತಳವಾರ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸೇರ್ಪಡೆಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಸಾಮಾಜಿಕ ಪ್ರಗತಿಗೆ ಒತ್ತು ನೀಡಿರುವುದರಿಂದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಮಸ್ತ ನಾಯಕ ಸಮುದಾಯ ಬಿಜೆಪಿ ಬೆಂಬಲಿಸಬೇಕೆಂದು ಸಂಸದ ಶ್ರೀರಾಮುಲು ಹೇಳಿದರು.

Advertisement

ಪಟ್ಟಣದಲ್ಲಿ ನಡೆದ ನಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿ, ಸಮುದಾಯ ಬಿಜೆಪಿ ಬೆಂಬಲಿಸಿ ರಾಜ್ಯದಲ್ಲಿ ಅಧಿಕಾರವನ್ನು ನೀಡಿದರೆ ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಶೇ.7.5 ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ಸಮುದಾಯವನ್ನು ನಿರ್ಲಕ್ಷಿಸಿರುವುದರಿಂದ ಜನ ಜಾಗೃತರಾಗಿ ಯಡಿಯೂರಪ್ಪನೇತೃತ್ವದ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.

ಬಿಜೆಪಿ ಅಭ್ಯರ್ಥಿ ಶಂಕರ್‌ ಮಾತನಾಡಿ, ತಾಲೂಕಿನ ಸಮಸ್ತ ನಾಯಕ ಸಮುದಾಯದ ಪರವಾಗಿ ಕೆಲಸವನ್ನು ಮಾಡಲು ಪಕ್ಷದ ಅಭ್ಯರ್ಥಿಯಾಗಿದ್ದೇನೆ. ಸಮಗ್ರ ಪರಿವಾರ ಮೂಲಕ ಕೇಂದ್ರ ಸರ್ಕಾರ ಹಲವು ವರ್ಷಗಳ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಆಮಿಷಕ್ಕೆ ಒಳಗಾಗದೆ ಬಿಜೆಪಿ ಬೆಂಬಲಿಸಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಜೆಡಿಎಸ್‌ ಎಸ್ಟಿ ಅಧ್ಯಕ್ಷ ಮೂಗೂರು ಕುಮಾರ ಹಾಗೂ ಎಸ್ಸಿ ಅಧ್ಯಕ್ಷ ವಿ.ವೆಂಕಟೇಶ್‌ ಶ್ರೀರಾಮುಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ವಿಧಾನ ಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌, ಕ್ಷೇತ್ರಾಧ್ಯಕ್ಷ ಎಚ್‌.ಎಂ.ಪರಶಿವಮೂರ್ತಿ, ನಾಯಕ ಸಮುದಾಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next