Advertisement
ಬುಧವಾರ ಬೆಳಿಗ್ಗೆಯಿಂದಲೇ ಸಚಿವರು ಹಾಗೂ ಬಿಜೆಪಿ ಶಾಸಕರು ಮತ್ತು ಪಕ್ಷದ ನಾಯಕರು ಸರತಿಯಲ್ಲಿ ಕಾಂಗ್ರೆಸ್‌ನ ಪಾದಯಾತ್ರೆಯ ಕುರಿತು ಪತ್ರಿಕಾಗೋಷ್ಠಿ ನಡೆಸಿ, ಕೊರೋನಾ, ಒಮಿಕ್ರಾನ್ ವೈರಸ್ ವೇಗವಾಗಿ ಹರಡುತ್ತಿರುವ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಪಾದಯಾತ್ರೆ ಮಾಡುತ್ತಿರುವುದು ಎಷ್ಟು ಸೂಕ್ತ ಎಂಬ ಪ್ರಶ್ನೆಯನ್ನು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
Related Articles
Advertisement
ಇದನ್ನೂ ಓದಿ:ಮಲೈಕಾ ಜತೆಗಿನ ಬ್ರೇಕ್ ಅಪ್ ವದಂತಿ ತಳ್ಳಿಹಾಕಿದ ಅರ್ಜುನ್ ಕಪೂರ್
ನಂತರ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಾಲ್ವರು ಬೆಂಗಳೂರು ನಗರ ಶಾಸಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್‌ನ ಬೇಜವಾಬ್ದಾರಿ ಪಾದಯಾತ್ರೆಯಿಂದ ಬೆಂಗಳೂರಿಗೆ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ.
ಸರ್ಕಾರ ಪಾದಯಾತ್ರೆ ಬೆಂಗಳೂರಿಗೆ ತಲುಪಲು ಅವಕಾಶ ನೀಡಬಾರದು. ಕಾಂಗ್ರೆಸ್ ನಾಯಕರನ್ನು ಬಂಧಿಸುವಂತೆ ಆಗ್ರಹಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯ ದೊಡ್ಡರಂಗೇಗೌಡ ಹಾಗೂ ನಟಿ ಶ್ರುತಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್‌ನ ವಿಳಂಬ ದ್ರೋಹದಿಂದ ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದಿದ್ದು, ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ನಿಯಮಗಳನ್ನು ಮೀರಿ ಪಾದಯಾತ್ರೆ ನಡೆಸುತ್ತಿರುವುದನ್ನು ನಾಡಿನ ಸಾಹಿತಿಗಳು, ಬುದ್ದಿಜೀವಿಗಳು ವಿರೋಧ ಮಾಡಬೇಕಿತ್ತು ಎಂದು ದೊಡ್ಡರಂಗೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ನಟಿ ಶ್ರತಿ, ಕಾಂಗ್ರೆಸ್‌ನ ಚಿತ್ರಕಥೆಯೇ ಸರಿಯಿಲ್ಲ. ಅದೂ ನಡು ಬೀದಿಯಲ್ಲಿ ಬಹಿರಂಗಗೊಂಡಿದ್ದು, ಇದು ಯಶಸ್ವಿಯಾಗುವುದಿಲ್ಲ ಎಂದರು.