Advertisement

ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ

10:19 AM Feb 27, 2021 | Team Udayavani |

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

Advertisement

ಸಿಎಂ ಬಿಎಸ್ ವೈ ಗೆ ಶುಭಾಶಯ ಕೋರಿ ಪಿಎಂ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ‘ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಯಡಿಯೂರಪ್ಪ ಅವರು ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಅವರು ರೈತರ ಕಲ್ಯಾಣ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಟ್ವಿಟ್ ಮಾಡಿ, ಬಿ ಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕರ್ನಾಟಕದ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಶ್ಲಾಘನೀಯ. ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ:ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

‘ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅವರ ಜನ್ಮದಿನದಂದು ಶುಭಾಶಯ ತಿಳಿಸುತ್ತೇನೆ. ಅವರು ಕರ್ನಾಟಕದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ. ಬಡವರನ್ನು ಮೇಲೆತ್ತುವ ಹಾಗೂ ರೈತರ ಸಬಲೀಕರಣದಲ್ಲಿ ಅವರು ಅವಿರತ ಕೆಲಸ ಮಾಡುತ್ತಿದ್ದಾರೆ. ಅವರ ಸುದೀರ್ಘ ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಟ್ವೀಟ್ ಮಾಡಿ, ಶ್ರಮಜೀವಿ ಕರ್ನಾಟಕ ಸಿಎಂ ಯಡಿಯೂರಪ್ಪನವರಿಗೆ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ, ಕರ್ನಾಟಕ ಅಭಿವೃದ್ಧಿಯ ಹೊಸ ಎತ್ತರಗಳನ್ನು ಸಾಧಿಸುತ್ತಿದೆ ಮತ್ತು ಸ್ವಾವಲಂಬಿ ಭಾರತದ ಕಡೆಗೆ ಸಕ್ರಿಯ ಪಾತ್ರ ವಹಿಸುತ್ತಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮದಿಂದ ಅಖಂಡ ಭಾರತ ಕನಸು ನನಸು: ಭಾಗವತ್‌

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next