ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೋದಲ್ಲಿ ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ದೇಶಗಳನ್ನು ಒಳಗೊಂಡ ಕ್ವಾಡ್ ಶೃಂಗ ಸಭೆ ಮಂಗಳವಾರ ಮುಕ್ತಾಯಗೊಂಡಿದ್ದು, ಏಷ್ಯಾ-ಫೆಸಿಪಿಕ್ ವಲಯದಲ್ಲಿ ಅನಗತ್ಯ ಪ್ರಚೋದನಕಾರಿ ಚಟುವಟಿಕೆ ನಡೆಸುತ್ತಿರುವ ಚೀನಾಕ್ಕೆ ಡ್ ಶೃಂಗ ಬಲವಾದ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.
ಇದನ್ನೂ ಓದಿ:ತಾಂಬೂಲ ಪ್ರಶ್ನೆ: ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ
ಕೋವಿಡ್ ಸಾಂಕ್ರಾಮಿಕದ ವೇಳೆ ದೇಶವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿ, ಜಾಗತಿಕ ಮಟ್ಟದಲ್ಲೂ ಕೋವಿಡ್ ನಿರ್ಮೂಲನೆಗೆ ಶ್ರಮಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಕಿಶಿದಾ, ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೊನಿ ಅಲ್ಬನೀಸ್ ಬಹುಪರಾಕ್ ಹೇಳಿದ್ದರು.
ಟೋಕಿಯೋದಲ್ಲಿ ನಡೆದ ಎರಡು ದಿನಗಳ ಕ್ವಾಡ್ ಶೃಂಗ ಸಭೆ ಮುಕ್ತಾಯಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಮೇ 25) ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಇದೀಗ ಕ್ವಾಡ್ ಶೃಂಗದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಕಿಶಿದಾ, ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಸೇರಿದಂತೆ ಎಲ್ಲಾ ಜಾಗತಿಕ ಮಟ್ಟದ ನಾಯಕರಿಗಿಂತ ಮುಂದೆ ಇರುವ ಪ್ರಧಾನಿ ನರೇಂದ್ರ ಮೋದಿ ಫೋಟೋ “ಜಾಗತಿಕ ನಾಯಕ” ಮೋದಿ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ.
ಕ್ವಾಡ್ ಶೃಂಗ ಸಭೆಯ ನಂತರ ಪ್ರಧಾನಿ ಮೋದಿ ಅವರು ವಿಮಾನದ ಮೆಟ್ಟಿಲುಗಳನ್ನು ಇಳಿದು ಬರುತ್ತಿರುವ ಸಂದರ್ಭದಲ್ಲಿ ಎಲ್ಲಾ ಜಾಗತಿಕ ನಾಯಕರಿಗಿಂತ ಮುಂಚೂಣಿಯಲ್ಲಿರುವ ಫೋಟೋವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದು, ಜಾಗತಿಕ ನಾಯಕ ಎಂದು ಶ್ಲಾಘಿಸಿದ್ದಾರೆ.