Advertisement

ಗೇಲ್‌ ಕಂಪನಿಯ ಪೈಪ್‌ನಲ್ಲಿ ಸೋರಿಕೆ

12:14 PM Mar 25, 2019 | Lakshmi GovindaRaju |

ಬೆಂಗಳೂರು: ಪರಪ್ಪನ ಅಗ್ರಹಾರ ಸಮೀಪದ ಎಇಸಿಎಸ್‌ ಲೇಔಟ್‌ನಲ್ಲಿ ಗೇಲ್‌ ಕಂಪನಿಯ ಪೈಪ್‌ನಲ್ಲಿ ಅನಿಲ ಸೋರಿಕೆಯಾದ ಪರಿಣಾಮ ನಡು ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.

Advertisement

ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಂಜೆ 7 ಗಂಟೆ ಸುಮಾರಿಗೆ ಪೈಪ್‌ನಲ್ಲಿ ಅನಿಲ ಸೋರಿಕೆಯಾಗಿದ್ದು, ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಗೇಲ್‌ ಕಂಪನಿ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಲ ತಿಂಗಳ ಹಿಂದೆ ಪರಪ್ಪನ ಅಗ್ರಹಾರ ಸಮೀಪದ ಶಿವಾರೆಡ್ಡಿ ಲೇಔಟ್‌ನಲ್ಲಿಯೂ ಗೇಲ್‌ ಕಂಪನಿಯ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಒಂದು ಮನೆ ಸಂಪೂರ್ಣ ಹಾನಿಯಾಗಿತ್ತು. ಅಲ್ಲದೆ,ನಾಲ್ಕೈದು ಮಂದಿಗೆ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next