Advertisement
ತುಂಬೆಯಿಂದ ಪಡೀಲ್ ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಅಡ್ಯಾರ್‌ನ ಮಾತಾ ನರ್ಸರಿಯ ಮುಂಭಾಗದಲ್ಲಿ ರವಿವಾರ ರಾತ್ರಿ ನೀರು ಸೋರಿಕೆಯಾಗಿತ್ತು. ಮುಖ್ಯ ಪೈಪ್‌ಲೈನ್‌ನ ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ನೀರು ಸೋರಿಕೆಯಾಗುತ್ತಿತ್ತು. ಪಡೀಲ್‌ಗೆ ತುಂಬೆಯಿಂದ ನೀರು ಸರಬರಾಜು ಆಗುವ ಪ್ರಮಾಣದಲ್ಲಿ ರವಿವಾರ ರಾತ್ರಿ ವೇಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪೈಪ್‌ಲೈನ್ ಪರಿಶೀಲಿಸಿದಾಗ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ.
ಮಳೆ ಆರಂಭವಾದ ಬಳಿಕ ತುಂಬೆಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಹಾನಿ, ಪಂಪ್‌ಸೆಟ್‌ನಲ್ಲಿ ಸಮಸ್ಯೆ ಸಹಿತ ವಿವಿಧ ತಾಂತ್ರಿಕ ಸಮಸ್ಯೆಗಳು ಕಾಣಿಸುತ್ತಲೇ ಇವೆ. ಜು. 4ರಂದು ಪಂಪ್‌ಹೌಸ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಕೆಲವೆಡೆಗಳಲ್ಲಿ ನೀರು ಸರಬರಾಜು ಸ್ಥಗಿತಗೊಂಡಿತ್ತು. ಬೃಹತ್ ಕೇಬಲ್‌ನಲ್ಲಿ ಸಮಸ್ಯೆ ಎದುರಾದ ಕಾರಣದಿಂದ ಪಡೀಲ್ ಪಂಪ್‌ಹೌಸ್‌ಗೆ ನೀರು ಸರಬರಾಜು ಸ್ಥಗಿತಗೊಂಡು, ನಗರದ ಅರ್ಧದಷ್ಟು ಭಾಗಗಳಿಗೆ ನೀರಿರದೆ ಸಮಸ್ಯೆ ಸೃಷ್ಟಿಯಾಗಿತ್ತು.