Advertisement

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಾಠ: ಆಪ್‌ ಕಿಡಿ

09:21 PM Mar 18, 2022 | Team Udayavani |

ನವದೆಹಲಿ: 6ರಿಂದ 12ನೇ ತರಗತಿ ವಿದ್ಯಾರ್ಥಿಗಳ ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದಾಗಿ ಗುಜರಾತ್‌ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ಆದೇಶವನ್ನು ದೆಹಲಿಯ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಮಂತ್ರಿಯಾಗಿರುವ ಮನೀಶ್‌ ಸಿಸೋಡಿಯಾ ಸ್ವಾಗತಿಸಿದ್ದಾರೆ. ಹಾಗೆಯೇ ಗುಜರಾತ್‌ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

“ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಸೇರಿಸುವುದು ಒಳ್ಳೆಯ ಯೋಜನೆಯೇ. ಆದರೆ ಅದಕ್ಕೂ ಮೊದಲು ಈ ಯೋಜನೆ ಮಾಡಿದವರು ಭಗವದ್ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ. 2022-23ನೇ ಶೈಕ್ಷಣಿಕ ವರ್ಷದಿಂದಲೇ ಗುಜರಾತ್‌ನಲ್ಲಿ ಹೊಸ ಪಠ್ಯಕ್ರಮ ಜಾರಿಗೆ ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next