ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ವೈದ್ಯಕೀಯ ಕಾಲೇಜು, ಜಿಲ್ಲಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗಾಗಿ ಹಾಸಿಗೆಗಳು, ಐಸಿಯು ಮತ್ತು ಮಿನಿ ಐಸಿಯು ಘಟಕಗಳನ್ನು ಈಗಿನಿಂದಲೇ ಸಿದ್ಧಗೊಳಿಸಬೇಕು.
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಪರಿಪಾಠ ನಿಲ್ಲಿಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದ್ದಾರೆ. ರವಿವಾರ ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್³ರೆನ್ಸ್‌ನಲ್ಲಿ ಈ ಕುರಿತು ಸೂಚನೆ ನೀಡಿದ ಅವರು, ಎರಡನೇ ಅಲೆಯನ್ನು ನಿಯಂತ್ರಿಸಿದ ಮಾದರಿಯಲ್ಲೇ ಮೂರನೇ ಅಲೆ ನಿಯಂತ್ರಿಸಲು ತುರ್ತು ಕ್ರಮ ತೆಗೆದುಕೊಳ್ಳಬೇಕು. ವಿಶೇಷವಾಗಿ 3-ಟಿ (ಪರೀಕ್ಷೆ, ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆ) ಸೂತ್ರ ಪಾಲಿಸಬೇಕು. ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ವಿಶೇಷ ಒತ್ತು ಕೊಟ್ಟು ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು. ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೂ ಅಭಿಯಾನದ ಶಿಬಿರಗಳನ್ನು ಪರಿಣಾಮಕಾರಿ ಯಾಗಿ ಹಮ್ಮಿಕೊಳ್ಳಬೇಕೆಂದು ಸೂಚಿಸಿದ್ದಾರೆ.
ವಿವಿಧ ಇಲಾಖೆಗಳ ಸಮನ್ವಯದಲ್ಲಿ ಅಧಿ ಕಾರಿಗಳನ್ನು ಒಳಗೊಂಡ ತಂಡ ರಚಿಸಬೇಕು. ಗ್ರಾಪಂ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟಗಳಲ್ಲಿ ಎಲ್ಲಿ ಗಂಭೀರ ಸಮಸ್ಯೆಗಳಿವೆ ಎನ್ನುವುದರ ಮಾಹಿತಿ ಮುಂಚಿತವಾಗಿಯೇ ಪಡೆದು ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಜನಪ್ರತಿನಿಧಿ ಗಳೊಂದಿಗೆ ನಿತ್ಯ ಜಿಲ್ಲಾಧಿ ಕಾರಿ, ಜಿಲ್ಲಾ ಆರೋಗ್ಯಾಧಿ ಕಾರಿ ಮತ್ತಿತರರು ವಿಡಿಯೋ ಕಾನ #ರೆನ್ಸ್ ನಡೆಸಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಜಿಲ್ಲಾ ಹಂತದ ಸ್ಥಳೀಯ ನಾಯಕರು, ಅಧಿ ಕಾರಿಗಳು, ಸ್ಥಳೀಯ ಸಂಸ್ಥೆಗಳ ಜತೆ ಸಮನ್ವಯ ಸಾಧಿ ಸಬೇಕು. ಜಿಲ್ಲೆಯು ಮಹಾರಾಷ್ಟ್ರ, ತೆಲಂಗಾಣ ಗಡಿ ಹಂಚಿಕೊಂಡಿರುವುದರಿಂದ ಗಡಿ ಭಾಗದಲ್ಲಿ ತಪಾಸಣೆಯನ್ನು ಹೆಚ್ಚು ಮಾಡಬೇಕೆಂದು ನಿರ್ದೇಶನ ನೀಡಿದ್ದಾರೆ.
ಕೊರೊನಾ ಮೂರನೇ ಅಲೆ ಸವಾಲಾಗಿ ಪರಿಣಮಿಸುತ್ತಿರುವುದರಿಂದ ಅ ಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಪ್ರತಿಯೊಂದು ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಔಷಧಗಳು, ಲಸಿಕೆ, ಹಾಸಿಗೆ ವ್ಯವಸ್ಥೆಯನ್ನು ಈಗಿನಿಂದಲೇ ಕಲ್ಪಿಸಬೇಕು. ಅಗತ್ಯವಿರುವ ಕಡೆ ಹೆಚ್ಚಿನ ಮೂಲಭೂತ ಸೌಕರ್ಯ ಹಾಗೂ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೂ ಗಮನ ಹರಿಸಬೇಕೆಂದು ಸೂಚಿಸಿದ್ದಾರೆ. ಸೋಂಕು ನಿಯಂತ್ರಿಸುವಲ್ಲಿ ವಾರಿಯರ್ಸ್‌ಗಳ ಪಾತ್ರ ಪ್ರಮುಖವಾಗಿದೆ.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇದು ನಮ್ಮ ಮನೆಯ ಸಮಸ್ಯೆಯೆಂದುಕೊಂಡು ಪ್ರತಿಯೊಬ್ಬರು ಸೋಂಕು ತಡೆಗಟ್ಟಲು ಶಪಥ ಮಾಡಬೇಕೆಂದು ಹೇಳಿದ್ದಾರೆ.