Advertisement
ಸರಕಾರಿ ಆಸ್ಪತ್ರೆ: ಬಾದಾಮಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ರೋಗಿಗಳು ಮಾಸ್ಕ್ ಧರಿಸದೇ ಇರುವುದು ಕಂಡ ಬಾಯಕ್ಕ ಮೇಟಿ, ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ಕೊಡಬೇಕು ಎಂದು ಸೂಚಿಸಿದರು. ಆಸ್ಪತ್ರೆಗೆ ಬರುವ ರೋಗಿ ಮತ್ತು ರೋಗಿಯ ಸಂಬಂಧಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಲು ತಿಳಿಸಬೇಕು ಎಂದರು.
Related Articles
Advertisement
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಎಪಿಎಂಸಿ ಹತ್ತಿರ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ರಿಯಾಯ್ತಿ ದರದಲ್ಲಿ ವಿತರಿಸಲು ಬೀಜ, ವಿವಿದ ಬೀಜ, ಸಾಮಗ್ರಿ ಪರಿಶೀಲಿಸಿದರು. ಆದರೆ, ರೈತ ಸಂಪರ್ಕ ಕೇಂದ್ರಕ್ಕೆ ಬಂದಿರುವ ವಿವಿದ ಬೀಜ, ಸಾಮಗ್ರಿಗಳ್ಳುಗಳ ಮಾಹಿತಿ ನೀಡಲು ಅಧಿಕಾರಿಗಳು ಇಲ್ಲದಿರುವುದು ಕಂಡು ಬಂದಿತು. ತಾಲೂಕಿನ ಕೆಲವರು ನನಗೆ ದೂರವಾಣಿ ಮೂಲಕ ತಿಳಿಸಿ ಅಧಿಕಾರಿಗಳು ಸರಿಯಾಗಿ ಸಿಗುತ್ತಿಲ್ಲ. ಜನಸಾಮಾನ್ಯರ ಕೆಲಸಗಳು ಆಗುತ್ತಿಲ್ಲ ಎಂದು ನನ್ನ ಗಮನಕ್ಕೆ ತಂದಿದ್ದು, ಬರಿ ಕೋವಿಡ್19 ನೆಪ ಹೇಳುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾಲ್ಕು ಕಚೇರಿಗಳಿಗೆ ಭೇಟಿ ನೀಡಿದ್ದು, ಕೃಷಿ ಇಲಾಖೆ ಅಧಿ ಕಾರಿಗಳು ಇರಲಿಲ್ಲ. ಬಹುತೇಕಅ ಧಿಕಾರಿಗಳು ಬರಿ ಕೋವಿಡ್19, ವಿಡಿಯೋ ಕಾನ್ಫೆರೆನ್ಸ್, ಸಂದರ್ಶನ ಹೀಗೆ ವಿವಿಧ ನೆಪ ಹೇಳಿ ಜನರಿಗೆ ಮತ್ತು ಜನಪ್ರತಿನಿಧಿ ಗಳಿಗೆ ಸಿಗುತ್ತಿಲ್ಲ.
ಹೀಗಾದರೆ ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದರು. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ
ಶಿಸ್ತುಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು. ಕೃಷಿ ಇಲಾಖೆಯ ಯೋಜನೆಗಳು ಕೆಲವೇ ಜನರಿಗೆ ಮಾತ್ರ ಸಿಗುತ್ತವೆ ಎಂದು ಕೆಲವರು ದೂರು ಸಲ್ಲಿಸಿದ್ದಾರೆ. ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ಸಿಗಬೇಕು ಎಂದರು. ಈ ಅವ್ಯವಸ್ಥೆ ಕುರಿತು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಅವರ
ಗಮನಕ್ಕೆ ತರಲಾಗುವುದು ಮತ್ತು ಜಿಲ್ಲಾ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.