Advertisement

ನಾಳೆಯಿಂದ ಮೀನುಗಾರಿಕೆಗೆ ರಜೆ; ದಡ ಸೇರುತ್ತಿವೆ ಬೋಟುಗಳು

12:04 AM May 31, 2019 | Team Udayavani |

ಮಹಾನಗರ: ಪ್ರಸ್ತುತ ಮೀನುಗಾರಿಕಾ ಋತು ಶುಕ್ರವಾರ ಪೂರ್ಣ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಮೀನುಗಾರಿಕೆಗೆಂದು ಕಡಲಿಗಿಳಿದಿದ್ದ ಬೋಟುಗಳು ದಡ ಸೇರುತ್ತಿವೆ. ಮಂಗಳೂರು ಮೀನುಗಾರಿಕಾ ಧಕ್ಕೆಯಿಂದ ಕಾರ್ಯಾಚರಿಸುತ್ತಿದ್ದ ಸುಮಾರು 800ರಷ್ಟು ಬೋಟುಗಳು ಈಗಾಗಲೇ ಧಕ್ಕೆಗೆ ವಾಪಾಸಾಗಿದ್ದು, ಸುಮಾರು 200ರಷ್ಟು ಬೋಟುಗಳು ಶುಕ್ರವಾರ ಸಂಜೆ ವೇಳೆಗೆ ವಾಪಾಸಾಗಲಿವೆ

Advertisement

ಜಿಲ್ಲೆಯಲ್ಲಿ ಯಾಂತ್ರೀಕೃತ ಮತ್ತು ಸಾಂಪ್ರದಾಯಿಕ ದೋಣಿಗಳ ಮುಖಾಂತರ ನಡೆಸುವ ಮೀನುಗಾರಿಕೆ ಚಟುವಟಿಕೆ ಯನ್ನು ಜೂ. 1ರಿಂದ ಜು. 31ರ ವರೆಗೆ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ. ಆ ಮೂಲಕ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾವುದೇ ಯಾಂತ್ರೀಕೃತ ದೋಣಿಗಳ ಮುಖಾಂತರ, 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್ಬೋರ್ಡ್‌ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿ ಗಳ ಮುಖಾಂ ತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಯನ್ನು ಮುಂದಿನ 61 ದಿನಗಳ ಕಾಲ ಕೈಗೊಳ್ಳುವಂತಿಲ್ಲ.

ಬೋಟು ತಂಗಲು ಜಾಗವೇ ಇಲ್ಲ
ನಗರದ ಮೀನುಗಾರಿಕೆ ಧಕ್ಕೆಗೆ ಒಳಪಟ್ಟಂತೆ ಮೋಟರೀಕೃತ ನಾಡದೋಣಿ, ಯಾಂತ್ರೀಕೃತ ದೋಣಿ ಸುಮಾರು 1,000ಕ್ಕೂ ಅಧಿಕ ಇವೆ. ಈಗ ಇರುವ ಧಕ್ಕೆ 600 ಮೀಟರ್‌ ಉದ್ದವಿದೆ.

ಇದರಲ್ಲಿ ಒಂದು ಸಾಲಿನಲ್ಲಿ ಕ್ರಮಪ್ರಕಾರವಾಗಿ ಹೆಚ್ಚಾ ಕಡಿಮೆ 350 ಬೋಟುಗಳಿಗೆ ನಿಲ್ಲಲು ಮಾತ್ರ ಅವಕಾಶವಿವೆ. ಉಳಿದಂತೆ ಎಲ್ಲ ಬೋಟುಗಳು ಇತರ ಪ್ರದೇಶಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಒಂದರ ಹಿಂದೆ ಇನ್ನೊಂದರಂತೆ 7 ಸಾಲುಗಳಲ್ಲಿ ಬೋಟುಗಳು ನಿಲ್ಲುವ ಪರಿಸ್ಥಿತಿ ಇಲ್ಲಿದೆ. ಮರದ, ಸ್ಟೀಲ್ಬೋಟುಗಳು ಇದರಲ್ಲಿ ಇರುವುದರಿಂದ ಬಹಳಷ್ಟು ಬಾರಿ ಬೋಟುಗಳು ಒಂದಕ್ಕೊಂದು ತಾಗಿ ಹಾನಿ ಸಂಭವಿಸುತ್ತಿವೆ.

ನಾಡದೋಣಿ ಮೀನುಗಾರಿಕೆ ಆರಂಭ

ಯಾಂತ್ರೀಕೃತ ಮೀನುಗಾರಿಕೆಗೆ ರಜೆ ಸಂದರ್ಭ ನಾಡದೋಣಿಗಳು ಮೀನು ಬೇಟೆಗೆ ಇಳಿಯುತ್ತವೆ. ದೋಣಿ-ಬಲೆಯೊಂದಿಗೆ ಕಡಲಿಗೆ ಇಳಿಯುವ ಇವರು 10 ಅಶ್ವಶಕ್ತಿಯ ಎಂಜಿನ್‌ ಅಳವಡಿಸಿದ ದೋಣಿಗಳಲ್ಲಿ ಸಮುದ್ರದ ಬದಿ, ನದಿಗಳಲ್ಲಿ ಜೂ. 1ರಿಂದ ಮೀನುಗಾರಿಕೆ ನಡೆಸುತ್ತಾರೆ. ಮೀನುಗಾರಿಕೆ ರಜೆ ಘೋಷಿಸಿದ ಸಂದರ್ಭ ಮೀನುಗಾರರು ಬೋಟ್ ರಿಪೇರಿ, ಬಲೆ ನೇಯುವುದು ಮತ್ತಿತರ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತಾರೆ ಎನ್ನುತ್ತಾರೆ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ನಿತಿನ್‌ ಕುಮಾರ್‌ ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next