ಮೈಸೂರು: ಕೋವಿಡ್ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರ ಆರೋಗ್ಯದ ದೃಷ್ಟಿಯಿಂದ ಕಾಂಗ್ರೆಸ್ ನವರು ಮೇಕದಾಟು ಪಾದಯಾತ್ರೆ ಕೈ ಬಿಡಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ವಿದೇಶದಲ್ಲೂ ಪ್ರಕರಣ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಸಾಕಷ್ಟು ಅನಾಹುತವಾಗಿದೆ. ಅದು ಮೂರನೇ ಅಲೆಯಲ್ಲಿ ಆಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಜನರ ಹಿತದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಬೇಕು ಎಂದರು.
ಚುನಾವಣಾ ಗಿಮಿಕ್: ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಮಾಡಲೇನು ಕೆಲಸವಿಲ್ಲ. ಪಾದಯಾತ್ರೆ ಒಂದು ಚುನಾವಣಾ ಗಿಮಿಕ್. ಇಷ್ಟು ವರ್ಷ ಅವರು ಏನು ಮಾಡಲಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಯೋಜನೆ ಬಗ್ಗೆ ಮಾತನಾಡಲಿಲ್ಲ. ಈಗ ರಾಜಕೀಯ ಕಾರಣಕ್ಕೆ ಪಾದಯಾತ್ರೆ ಗಿಮಿಕ್ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಎಂದು ಸೋಮಶೇಖರ್ ಟೀಕಿಸಿದರು.
ಇದನ್ನೂ ಓದಿ:ಇಮ್ರಾನ್ ಖಾನ್ ಮಾಜಿ ಪತ್ನಿ ಕಾರಿನ ಮೇಲೆ ಗುಂಡಿನ ದಾಳಿ: ‘ಇದೇನಾ ಹೊಸ ಪಾಕಿಸ್ಥಾನ’ ಎಂದ ರೆಹಮ್
ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರವಾಗಿ ಮಾತನಾಡಿದ ಸಚಿವರು, ಕೇಂದ್ರ ಹಾಗೂ ತಜ್ಞರ ಸಲಹೆ ಮೇರೆಗೆ ನಿರ್ಧಾರ ಮಾಡಲಾಗುವುದು. ಅವರು ಕಠಿಣ ಕ್ರಮ ಸೇರಿ ಏನೇ ಸಲಹೆ ಕೊಟ್ಟರೂ ಪಾಲಿಸುತ್ತೇವೆ. ಸದ್ಯಕ್ಕೆ ಬೇರೆ ರಾಜ್ಯದಷ್ಟು ನಮ್ಮಲ್ಲಿ ಸಮಸ್ಯೆಯಾಗಿಲ್ಲ. ಜನರು ಸಹಕಾರ ನೀಡುತ್ತಿದ್ದಾರೆ. ಎರಡು ದಿನಕ್ಕೊಮ್ಮೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ತಜ್ಞರ ಜೊತೆ ಸಭೆ ನಡೆಯುತ್ತಿದೆ, ಎರಡನೇ ಅಲೆಯಿಂದ ಆದ ಅನಾಹುತದಿಂದ ಎಲ್ಲರೂ ಎಚ್ಚೆತ್ತುಕೊಂಡಿದ್ದಾರೆ ಎಂದರು.