Advertisement

ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಉಪನ್ಯಾಸಕರ ಮನವಿ

04:18 PM Dec 01, 2019 | Suhan S |

ಹಾವೇರಿ: ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಎರಡನೇ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡಬೇಕುಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಉಪನ್ಯಾಸಕರಕಾರ್ಯಭಾರ ಕುರಿತು ಉನ್ನತ ಮಟ್ಟದಪರಿಷತ್‌ ರಚಿಸಬೇಕು. ಅಲ್ಲಿಯವರೆಗೆ ಪ್ರತಿ ಉಪನ್ಯಾಸಕರಿಗೆ 16 ತಾಸು ಬೋಧನಾ ಅವಧಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

Advertisement

ಪದೋನ್ನತಿ ಹೊಂದಿ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುವವರಿಗೆ ಕಾಲಮಿತಿ ಬಡ್ತಿ ಮಂಜೂರು ಮಾಡಿ, ಪ್ರತಿ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು 80 ರಿಂದ 40ಕ್ಕೆ ನಿಗದಿ ಪಡಿಸಬೇಕು. ನೆಟ್‌, ಸ್ಲೆಟ್‌, ಪಿಎಚ್‌ಡಿ ಅರ್ಹತೆ ಪಡೆದವರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು. ಪಬ್ಲಿಕ್‌ ಕಾಲೇಜುಗಳಸಮಸ್ಯೆಯನ್ನು ಬಗೆಹರಿಸಬೇಕು.

ಅನುದಾನಿತ ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಬೇಕುಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಬೇಕು. ಸರ್ಕಾರ ಬೇಡಿಕೆಗಳಿಗೆಸ್ಪಂದಿಸದಿದ್ದರೆ 2020ರ ಮೌಲ್ಯಮಾಪನ ಪ್ರಕ್ರಿಯೆ ಬಹಿಷ್ಕರಿಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಕುರಿತಾದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು.

ಜಿಲ್ಲಾ ಉಪನ್ಯಾಕರ ಸಂಘದ ಅಧ್ಯಕ್ಷ ಎಸ್‌. ಎಸ್‌. ನಿಸ್ಸೀಮಗೌಡ್ರ, ಪ್ರಕಾಶ ಬಾರಕೇರ, ಮಂಜುನಾಥ ಬೆನಕನಕೊಂಡ, ವೀರೇಶ ಲಿಂಗದಹಳ್ಳಿ, ಸಿದ್ದಣ್ಣ ಮರಡಿ, ಕಾಂತೇಶಸಿದ್ದಣ್ಣನವರ, ಪರಶುರಾಮ ಗಚ್ಚಿಮನಿ, ಎನ್‌.ಎಸ್‌. ಹಿರೇಮಠ, ರಮೇಶ ತಳವಾರ, ಜಿ.ಎಸ್‌. ಕಟೂರ, ಪ್ರಮೊದ ನಲವಾಗಲ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next