ಮೈಸೂರು: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಿಲ್ಲಾ ಘಟಕದ ವತಿಯಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ವಿಳಂಬ ಸೇರಿ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉಪನ್ಯಾಸಕರ ಸಂಘ ಜಿಲ್ಲಾ ಘಟಕದಅಧ್ಯಕ್ಷ ಬಿ.ಸಿ.ಯೋಗಾನಂದ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕರು, ಪ್ರಚಾರ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ವೇತನ ಕೂಡಲೇ ಬಿಡುಗಡೆಗೊಳಿಸಬೇಕು, ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಸರ್ಕಾರದ ಲಿಖೀತ ಭರವಸೆಯಂತೆ ಎರಡನೇ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
2008ರ ನಂತರ ಆಯ್ಕೆಯಾದ ಉಪನ್ಯಾಸಕರಿಗೆ ನೀಡುತ್ತಿದ್ದ 500 ರೂ. ಗಳ ಎಕ್ಸ್‌ಗ್ರೇಷಿಯಾವನ್ನು ಕೂಡಲೇ ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಈಗಾಗಲೇ ನೀಡಿರುವ ಎಕ್ಸ್‌ಗ್ರೇಷಿಯಾವನ್ನ ಮರುಪಾವತಿಸುವಂತೆ ಮಾಡಿರುವ ಆದೇಶ ಈ ಕೂಡಲೇಹಿಂಪಡೆಯಬೇಕು. ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪದವಿ ಪೂರ್ವಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆಕಾಲಮಿತಿ ವೇತನ ಬಡ್ತಿಯನ್ನು ಕೂಡಲೇ ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಆಗ್ರಹಿಸಿದರು.
ಸಮಿತಿ ರಚಿಸಿ:ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎಂ.ಎಂ.ಮಹದೇವ ಮಾತನಾಡಿ, ಪದವಿ ಪೂರ್ವ ಶಿಕ್ಷಣಇಲಾಖೆಯಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಉಪ ನ್ಯಾಸಕರ ಕಾರ್ಯಭಾರಕುರಿತು ಉನ್ನತ ಮಟ್ಟದ ಪರಿಷತ್ ಸಮಿತಿ ರಚಿಸಬೇಕು, ಅಲ್ಲಿಯವರೆಗೆ ಪ್ರತಿ ಉಪನ್ಯಾಸಕರಿಗೆ ವಾರದಲ್ಲಿ 16 ಗಂಟೆಗಳ ಬೋಧನಾ ಅವಧಿಯನ್ನು ಮುಂದುವರಿಸಬೇಕು ಎಂದರು. ಪದವಿ ಪೂರ್ವ ಕಾಲೇಜುಗಲ್ಲಿ ಎನ್ ಸಿಇಆರ್‌ಟಿ ನಿಯಮಾವಳಿಯಂತೆ ಪ್ರತಿ ತರಗತಿಗೆ ವಿದ್ಯಾರ್ಥಿಗಳ ಗರಿಷ್ಠ ಸಂಖ್ಯೆಯನ್ನು 80 ರಿಂದ 40ಕ್ಕೆ ನಿಗದಿಪಡಿಸಿ ಆದೇಶ ಹೊರಪಡಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೆಟ್, ಸ್ಲಟ್, ಪಿಎಚ್‌ಡಿ ವಿದ್ಯಾರ್ಹತೆ ಹೊಂದಿರುವ ಉಪನ್ಯಾಸಕರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.