Advertisement

ಜೆಡಿಎಸ್‌ ಮಹಿಳಾ ಘಟಕಕ್ಕೆ ಲೀಲಾದೇವಿ ಅಧ್ಯಕ್ಷೆ

12:53 AM Jun 28, 2019 | Sriram |

ಬೆಂಗಳೂರು: ತಳಮಟ್ಟದಿಂದ ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ರಾಜ್ಯ ಮಹಿಳಾ ಘಟಕ ಅಧ್ಯಕ್ಷರನ್ನಾಗಿ ಮಾಜಿ ಸಚಿವೆ ಲೀಲಾ ದೇವಿ ಆರ್‌.ಪ್ರಸಾದ್‌ ಅವರನ್ನು ನೇಮಿಸಿದ್ದಾರೆ.

Advertisement

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಾಮಾಜಿಕ ಕಾರ್ಯಕರ್ತೆ ರುತ್‌ ಮನೋರಮಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿ ಸಿದ್ದಾರೆ. ಲೀಲಾದೇವಿ ಆರ್‌.ಪ್ರಸಾದ್‌ ಅವರು ಜನತಾದಳ ಸರ್ಕಾರ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆಯಾ ಗಿದ್ದರು. ಒಂದು ಅವಧಿಗೆ ರಾಜ್ಯಸಭೆ ಸದಸ್ಯೆಯಾಗಿದ್ದರು.

ಇನ್ನು ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕೆಂಬ ಬಗ್ಗೆ ಪಕ್ಷದ ಪ್ರಮುಖ ನಾಯಕರ ಜತೆ ನಿರಂತರ ಚರ್ಚೆಯಲ್ಲಿರುವ ದೇವೇಗೌಡರು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲು ತೀರ್ಮಾನಿಸಿದ್ದಾರೆ.

ಪ್ರಮುಖವಾಗಿ ಮಧು ಬಂಗಾರಪ್ಪ ಹಾಗೂ ಎಚ್.ಕೆ.ಕುಮಾರಸ್ವಾಮಿ ಹೆಸರು ಪರಿಶೀಲನೆಯಲ್ಲಿದೆ. ಈಗಾಗಲೇ ಮಧು ಬಂಗಾರಪ್ಪ ಅವರು ರಾಜ್ಯ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಎಚ್.ವಿಶ್ವನಾಥ್‌ ಸೇರಿ ಬಹುತೇಕ ನಾಯಕ ಒಲವು ಹೊಂದಿದ್ದಾರೆ.

ಆದರೆ, ದಲಿತ ಸಮುದಾಯದವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ದೇವೇಗೌಡರು ಚಿಂತನೆ ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಅವಕಾಶ ಕೊಡುವ ಅದರಲ್ಲೂ ಬಿ.ಎಂ.ಫ‌ರೂಕ್‌ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

Advertisement

ಮಧು ಬಂಗಾರಪ್ಪ, ಎಚ್.ಕೆ.ಕುಮಾರಸ್ವಾಮಿ, ಬಿ.ಎಂ.ಫ‌ರೂಕ್‌ ಕುರಿತು ಗೌಡರು ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮುಗಿಸಿ ಬಂದ ತಕ್ಷಣ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.

ಪ್ರಾತಿನಿಧ್ಯ: ಲಿಂಗಾಯತ ಸಮುದಾಯದ ಲೀಲಾದೇವಿ ಆರ್‌.ಪ್ರಸಾದ್‌ ಅವರನ್ನು ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಿಸಲಾಗಿದ್ದು, ದಲಿತ ವರ್ಗದವರಿಗೆ ರಾಜ್ಯಾಧ್ಯಕ್ಷ ಸ್ಥಾನ, ಹಿಂದುಳಿದ ವರ್ಗದವರಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ, ಮುಸ್ಲಿಂ ಹಾಗೂ ಲಿಂಗಾಯತರಿಗೆ ಮಹಾಪ್ರಧಾನ ಕಾರ್ಯದರ್ಶಿ ಹುದ್ದೆ, ಕುರುಬ, ಯಾದವ, ಬಲಿಜ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಕಾರ್ಯಾಧ್ಯಕ್ಷರ ಹುದ್ದೆ ನೀಡುವುದು ದೇವೇಗೌಡರ ಲೆಕ್ಕಾಚಾರವಾಗಿದೆ.

ಬ್ರಾಹ್ಮಣ ಸಮುದಾಯದ ವೈ.ಎಸ್‌.ವಿ.ದತ್ತಾ ಅವರಿಗೆ ಈಗಾಗಲೇ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹೀಗಾಗಿ, ಎಲ್ಲ ವರ್ಗದವರಿಗೂ ಪಕ್ಷದಲ್ಲಿ ಅಧಿಕಾರ ಕಲ್ಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

‘ಮಹಿಳೆಯರನ್ನು ಸಂಘಟಿಸಿ ಪಕ್ಷ ಕಟ್ಟುವೆ’
ಬೆಂಗಳೂರು: ‘ಮಹಿಳೆಯರನ್ನು ಸಂಘಟಿಸಿ ಪಕ್ಷ ಕಟ್ಟುವ ಕೆಲಸ ಮಾಡುವೆ’ ಎಂದು ಜೆಡಿಎಸ್‌ನ ಮಹಿಳಾ ಘಟಕದ ನೂತನ ಅಧ್ಯಕ್ಷೆ ಲೀಲಾ ದೇವಿ ಆರ್‌.ಪ್ರಸಾದ್‌ ತಿಳಿಸಿ ದ್ದಾರೆ.

ಮಹಿಳಾ ಘಟಕದ ಅಧ್ಯಕ್ಷೆ ಯಾಗಿ ನೇಮಕ ಗೊಂಡ ನಂತರ ಮಾತನಾಡಿದ ಅವರು, ದೇವೇಗೌಡರು ನನ್ನ ಮೇಲೆ ನಂಬಿಕೆಯಿಟ್ಟು ಹೊಣೆ ಗಾರಿಕೆ ಕೊಟ್ಟಿದ್ದಾರೆ. ಪಕ್ಷ ಸಂಘಟನೆ ಮಾಡುತ್ತೇ ನೆಂದು ಹೇಳಿದರು. ಯುವಮಹಿಳೆಯರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುತ್ತೇನೆ. ನಮ್ಮ ಚಿಹ್ನೆಯೇ ಮಹಿಳೆ. ಪ್ರತಿ ಜಿಲ್ಲೆ, ತಾಲೂಕು ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇನೆಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next