Advertisement
ನಿಯಮವೇನು?: ವಾಯುಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ ಕಾಯಿದೆ 1981ರ ಸೆಕ್ಷನ್ 19(5)ರ ಅಡಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆಧರಿಸಿ, ಕಸಕ್ಕೆ ಬೆಂಕಿ ಹಚ್ಚುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಅದರಂತೆ ಜನವಸತಿ ಪ್ರದೇಶ ಅಥವಾ ಬಯಲು ಜಾಗಗಳಲ್ಲಿ ಕಸಕ್ಕೆ ಬೆಂಕಿ ಇಡುವಂತಿಲ್ಲ. ಸರ್ಕಾರದ ಆದೇಶ ಉಲ್ಲಂಘಿಸಿ ಕಸಕ್ಕೆ ಬೆಂಕಿ ಹಚ್ಚಿದರೆ 5 ಲಕ್ಷ ರೂ. ವರೆಗೆ ದಂಡ ತೆರಬೇಕು. ಇಲ್ಲವೇ 5 ವರ್ಷ ಜೈಲು ಮತ್ತು ದಂಡ ಪಾವತಿ ಶಿಕ್ಷೆ ವಿಧಿಸಬಹುದಾಗಿ ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಅರಿವಿಲ್ಲದೇ ಇರುವುದರಿಂದ ಅವರು ಇದನ್ನು ಜಾರಿಗೆ ತರುವ ಗೋಜಿಗೆ ಹೋಗುತ್ತಿಲ್ಲ.
Related Articles
Advertisement
ನೀರಾವರಿ ಅಧಿಕಾರಿ ಬೇಜವಾಬ್ದಾರಿ: ನೀರಾವರಿ ಇಲಾಖೆಯಲ್ಲಿ ಉದ್ಯಾನವನ ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಿ ಕೈ ತೊಳೆದುಕೊಂಡಿದ್ದಾರೆ. ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದನ್ನು ವಿಚಾರಣೆ ಮಾಡುತ್ತಿಲ್ಲ. ಅಧಿಕಾರಿಗಳಿಗೆ ಸರ್ಕಾರ ವೇತನದ ಅನೇಕ ಭತ್ಯಗೆಳನ್ನು ನೀಡಿ ಜೊತೆಗೆ ವಾಹನ ವ್ಯವಸ್ಥೆ ಕಲ್ಪಿಸಿದೆ. ಆದರೂ ಹೇಮಾವತಿ ನಾಲೆ ಮೇಲೆ ಆಗುತ್ತಿರುವ ವಾಯು ಮಾಲಿನ್ಯ ತಪ್ಪಿಸಲು ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ.
ನಾಲೆ ಏರಿಮೇಲೆ ಹೆಚ್ಚು ಬೆಂಕಿ: ಹೇಮಾವತಿ ನಾಲೆ ಮೇಲೆ ಆಟೋದಲ್ಲಿ ಆಗಮಿಸುವವರು ಕಸವನ್ನು ತಂದು ಸುರಿಯುತ್ತಾರೆ. ನಿರುಪಯುಕ್ತ ವಸ್ತುಗಳಿಗೆ ಬೆಂಕಿ ಹಾಕಲಾಗುತ್ತಿದೆ, ಇದರಿಂದ ಹೇಮಾವತಿ ಉದ್ಯಾನವನದಲ್ಲಿ ವಾಯುವಿಹಾರ ನಡೆಸುವವರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ವಾಯು ಮಾಲಿನ್ಯದಲ್ಲಿಯೇ ವಾಯು ವಿಹಾರ ಮಾಡುವ ಪರಿಸ್ಥಿತಿ ಉದ್ಭವವಾಗಿದೆ. ಇನ್ನೂ ಪಟ್ಟಣಕ್ಕೆ ಆಗಮಿಸುವ ನಾಗಸಮುದ್ರ ಹಾಗೂ ಬೆಲಸಿಂದ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ.
ಹೇಮಾವತಿ ಉದ್ಯಾನವನದ ಸುತ್ತ ಕಸ ಸುರಿಯುವುದ್ದನ್ನು ತಡೆಗೆ ಕ್ರಮ ಕೈಗೊಳ್ಳಲಾಗುವುದು. ಸಿಸಿ ಕ್ಯಾಮೆರಾ ಅಳವಡಿಸಲು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಲ್ಲಿ ಯಾರಾದರೂ ಕಸ, ತ್ಯಾಜ್ಯ ಸುರಿದರೆ ಸಿಸಿ ಕ್ಯಾಮೆರಾ ಮೂಲಕ ಅವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ● ಸಿ.ಎನ್.ಬಾಲಕೃಷ್ಣ ಶಾಸಕ.
ಶ್ರವಣಬೆಳಗೊಳ ಕ್ಷೇತ್ರ ಪ್ಲಾಸ್ಟಿಕ್ ವಸ್ತುಗಳಿಗೆ ಬೆಂಕಿ ಹಾಕುವುದ ರಿಂದ ವಾಯು ಮಾಲಿನ್ಯವಾಗುತ್ತಿದೆ. ಅನೇಕ ರೋಗಗಳು ಬರುತ್ತವೆ. ದಯಾಮಾಡಿ ಪುರಸಭೆ ಅಧಿಕಾರಿಗಳು ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಬೇಕಾಗಿದೆ. ● ಅಶೋಕ್, ಪರಿಸರ ಪ್ರಶಸ್ತಿ ಪುರಸ್ಕೃತರು
ಹೇಮಾವತಿ ನಾಲೆ ಏರಿ ಮೇಲೆ ಸಂಗ್ರಹವಾಗಿದ್ದ ಕಸವನ್ನು ತೆರವು ಮಾಡಿ ಹಲವು ಬಾರಿ ಸ್ವತ್ಛತೆ ಮಾಡಲಾಗಿದೆ. ನೀರಾವರಿ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿ ಯಿಂದ ನಾಲೆ ಏರಿ ಮೇಲೆ ಪದೇ ಪದೆ ಕಸ ಸುರಿದು ಬೆಂಕಿ ಹಚ್ಚಲಾಗುತ್ತಿದೆ. ● ಹೇಮಂತ್, ಪುರಸಭೆ ಮುಖ್ಯಾಧಿಕಾರಿ
– ಶಾಮಸುಂದರ್ ಕೆ. ಅಣ್ಣೇನಹಳ್ಳಿ