Advertisement
ಮೈಸೂರು ಲಿಟರರಿ ಫೋರಂ ಚಾರಿಟಬಲ್ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ ನಗರದ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಿರುವ ಎರಡು ದಿನಗಳ ಮೈಸೂರು ಸಾಹಿತ್ಯ ಸಂಭ್ರಮ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
Related Articles
Advertisement
ಚಾಲನೆ: ಮೈಸೂರು ಸಾಹಿತ್ಯ ಸಂಭ್ರಮದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಆರಂಭಿಸಲಾಗಿರುವ ಎನೇಬಲ್ ಹರ್ ಯೋಜನೆಗೆ ಚಾಲನೆ ನೀಡಿದ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮಾತನಾಡಿ, ಮೈಸೂರು ಲಿಟರರಿ ಫೋರಂ ಚಾರಿಟಬಲ್ ಟ್ರಸ್ಟ್ ಸಾಹಿತ್ಯ ಸಂಭ್ರಮವನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿರುವುದು ಸಂತಸದ ವಿಷಯ.
ಒಂದು ಸಂಸ್ಥೆ ಅಥವಾ ಸಂಘಟನೆಯ ಯಶಸ್ಸಿಗೆ ದೂರದೃಷ್ಟಿತ್ವ, ಮುಂದಾಲೋಚನೆ, ಕಠಿಣ ಪರಿಶ್ರಮ ಮತ್ತು ಒಗ್ಗಟ್ಟು ಮುಖ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಲೇಖಕ ಡಾ.ದೇವದತ್ತ ಪಟ್ನಾಯಕ್ ದಿಕ್ಸೂಚಿ ಭಾಷಣ ಮಾಡಿದರು. ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಉದ್ಯಮಿ ಆರ್. ಗುರು ಮತ್ತಿತರರು ಉಪಸ್ಥಿತರಿದ್ದರು.