Advertisement

ಸಿಎಎ ರದ್ದತಿಗೆ ಎಡಪಕ್ಷಗಳ ಮನವಿ

12:53 PM Dec 20, 2019 | Team Udayavani |

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ-2019 ರದ್ದತಿಗೆ ಒತ್ತಾಯಿಸಿ ಗುರುವಾರ ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳ ಮುಖಂಡರು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅತ್ಯಂತ ತರಾತುರಿಯಲ್ಲಿ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದ್ಯಾಂತ ನಾಗರಿಕರು ತೀವ್ರ ಸ್ವರೂಪದಲ್ಲಿ ವಿರೋಧ ಮಾಡುತ್ತಿದ್ದರೂ ಬಲವಂತವಾಗಿ ಜನವಿರೋಧಿ ಕಾಯ್ದೆ ಜಾರಿಗೊಳಿಸುತ್ತಿರುವುದು ಸರ್ಕಾರದ ದೌರ್ಜನ್ಯದ ನಡೆ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಗುರುವಾರ ಎಡಪಕ್ಷಗಳು, ಇತರೆ ಪ್ರಗತಿಪರ ಸಂಘಟನೆಗಳು ಹೋರಾಟ ಹಮ್ಮಿಕೊಂಡಿದ್ದವು. ಏಕಾಏಕಿ 144 ನೇ ಸೆಕ್ಷನ್‌ ಮೂಲಕ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ನಾಗರಿಕ ಹಕ್ಕನ್ನು ಮೊಟಕುಗೊಳಿಸಿರುವ ಸರ್ಕಾರದ ನೀತಿ ಖಂಡನೀಯ. ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌.ಕೆ.ರಾಮಚಂದ್ರಪ್ಪ, ಸಿಪಿಐ(ಎಂ) ಕಾರ್ಯದರ್ಶಿ ಟಿ.ವಿ. ರೇಣುಕಮ್ಮ, ಆನಂದರಾಜ್‌, ಆವರಗೆರೆ ಚಂದ್ರು, ಆವರಗೆರೆ ವಾಸು, ರಂಗನಾಥ್‌, ಶ್ರೀನಿವಾಸಮೂರ್ತಿ, ಸರೋಜಾ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next