Advertisement

ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

02:56 PM Jul 26, 2023 | Team Udayavani |

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Advertisement

ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next