Advertisement

ಅಕ್ರಮ ಮದ್ಯ ಮಾರಾಟ ಮಾಡಿದರೆ ಕಾನೂನು ಕ್ರಮ

05:56 PM Feb 18, 2022 | Team Udayavani |

ನಾಗರಹಾಳ: ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಬಟ್ಟಿ ಸಾರಾಯಿ ದಂಧೆ, ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆಯವುದು ಸೇರಿದಂತೆ ಇತರೆ ಅಕ್ರಮ ಕ್ರಮ ಚಟುವಟಿಕೆಗಳ ಕಂಡುಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲಿಂಗಸುಗೂರು ಅಬಕಾರಿ ಉಪ ನಿರೀಕ್ಷಕ ಮಹಮ್ಮದ್‌ ಹುಸೇನ್‌ ಹೇಳಿದರು.

Advertisement

ಸಮೀಪದ ಉಪ್ಪಾರ ನಂದಿಹಾಳ ಗ್ರಾಪಂ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ಕಳ್ಳಬಟ್ಟಿ ಸಾರಾಯಿ ಕುಡಿತದಿಂದ ಅವರ ಕುಟುಂಬ ಬೀದಿಪಾಲಾಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬಗಡಿತಾಂಡಾ, ರೇಷ್ಮೆ ತಾಂಡಾಗಳಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ದಂಧೆ ಹಾಗೂ ಕೆಲ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿವರಗಳನ್ನು ಸಾರ್ವಜನಿಕರು ಹಾಗೂ ಗ್ರಾಪಂ ಅಧಿ ಕಾರಿಗಳು ಒಂದು ವಾರದೊಳಗೆ ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಗ್ರಾಮಗಳಲ್ಲಿ ಅಕ್ರಮ ಕಳ್ಳಬಟ್ಟಿ ಹಾಗೂ ಮದ್ಯ ಮಾರಾಟಗಳು ನಡೆದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವುಕುಮಾರ ಕಮ್ಮಾರ, ಕರ ವಸೂಲಿಗಾರ ಗದ್ದೆಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next