Advertisement

ಉತ್ತಮ ಬದುಕಿಗೆ ಕಾನೂನಿನ ನೆರವು ಅಗತ್ಯ:ಮಲ್ಲಾಪುರ

01:00 AM Mar 10, 2019 | Team Udayavani |

ಮಡಿಕೇರಿ :ಜೀವನದಲ್ಲಿ ನೆಮ್ಮದಿ ಮತ್ತು ಶಾಂತಿಯ ಬದುಕು ನಡೆಸಲು ಮಹಿಳೆಯರು ತಮಗಿರುವ ಕಾನೂನನ್ನು ಖಡ್ಗದಂತೆ ಬಳಸುವ ಬದಲು ಕವಚದಂತೆ ಬಳಸಿಕೊಂಡರೆ ಜೀವನವು ಸಂತೋಷದಿಂದ ತುಂಬಿರುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವಿ.ವಿ.ಮಲ್ಲಾಪುರ ಅವರು ತಿಳಿಸಿದರು.

Advertisement

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನ್ಯಾಯಾಂಗ ಇಲಾಖಾ ನೌಕರರ ಸಂಘ ಮತ್ತು ಸರ್ಕಾರಿ ಅಭಿಯೋಜನಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಕಾನೂನಿನೊಂದಿಗೆ ನಮ್ಮ ಜೀವನವನ್ನು ಹೊಂದಾಣಿಕೆಯೊಂದಿಗೆ ನಡೆಸಿಕೊಂಡು ಸಾಗಿಸುವುದು ಅತಿಮುಖ್ಯ. ಸರ್ಕಾರ ರಚಿಸಿದ ಹಲವಾರು ಕಾನೂನುಗಳು ಮಹಿಳೆಯ ಹಕ್ಕುಗಳನ್ನು ರಕ್ಷಣೆ ಮಾಡುವುದರೊಂದಿಗೆ ಸಂಕಷ್ಟದಲ್ಲಿ ನೆರವಿಗೆ ಬಂದು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್‌ ಅವರು ಮಾತನಾಡಿ ಮಹಿಳೆಯರು ಪ್ರತಿಯೊಬ್ಬರ ಜೀವನದಲ್ಲೂ ಮಹತ್ತರ ಪಾತ್ರವನ್ನು ವಹಿಸುತ್ತಾರೆ. ಮಹಿಳೆಯರು ಪ್ರಸ್ತುತ ಕಾಲ ಘಟ್ಟದಲ್ಲಿ ಪುರುಷರಂತೆ ಹಲವು ಮಹತ್ತರ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದು ಮಹತ್ತರ ಸಾಧನೆಗಳನ್ನು ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಸಿಜೆಎಂ ವಿಜಯ ಕುಮಾರ್‌ ಅವರು ಮಾತನಾಡಿದರು.  ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ ಅವರು ಮಾತನಾಡಿ ಪ್ರತಿ ಕುಟುಂಬದಲ್ಲೂ ಮಹಿಳೆಯರಿಗೆ ಉತ್ತೇಜನ ನೀಡುವುದರ ಮೂಲಕ ಮಹಿಳೆಯರು ಹೆಚ್ಚಿನ ಸಾಧನೆ ಮಾಡಲು ಸಹಕರಿಸಬೇಕುಎಂದರು. ಹಿರಿಯ ಸಿವಿಲ್‌ ನ್ಯಾಯಾಧೀಶೆ ನೂರುನ್ನಿಸ ಅವರು ಮಾತನಾಡಿ 1931 ರಿಂದ ದೇಶದಲ್ಲಿ ಪ್ರಥಮ ಬಾರಿಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳೆಯು ಮಗಳಾಗಿ, ಸೊಸೆಯಾಗಿ, ತಾಯಿಯಾಗಿ, ಅತ್ತೆಯಾಗಿ, ಅಜ್ಜಿಯಾಗಿ ಜೀವನದಲ್ಲಿ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಕಟ್ಟುವಂತಹ ಕೆಲಸವನ್ನು ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. 

Advertisement

    ಉದ್ಯೋಗಸ್ಥ ಮಹಿಳೆಯರು ತಮ್ಮ ಕರ್ತವ್ಯವನ್ನು ನಿರ್ವಹಿಸುವುದರೊಂದಿಗೆ ಕುಟುಂಬವನ್ನು ನಿರ್ವಹಣೆ ಮಾಡಿ 

ಸಮಾನತೆಯಿರಲಿ
     ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಬಿ.ಕೆ.ಮನು ಅವರು ಮಾತನಾಡಿ ಪ್ರತಿ ಪುರುಷರ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ಮಹತ್ತರವಾದುದು. ಎಲ್ಲಾ ರಂಗದಲ್ಲು ಮಹಿಳೆಯರು ಪುರುಷರಿಗೆ ಸರಿಸಮಾನರಾಗಿ ಕಾರ್ಯ ನಿರ್ವಹಿಸುತ್ತಿದ್ದು ಸಮಾನತೆಯ ಸಮಾಜ ನಿರ್ಮಾಣಕ್ಕೆ ಮುಖ್ಯ ಪಾತ್ರವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next