Advertisement
ಅವರು ಅ. 18 ರಂದು ಶಿರ್ವ ಗ್ರಾ.ಪಂ. ಸಭಾ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ಆಯೋಗ,ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ ಮತ್ತು ಜಿ.ಪಂ. ಉಡುಪಿ,ಜಿಲ್ಲಾ ಮಕ್ಕಳ ರಕ್ಷಣೆ ಘಟಕ ಮತ್ತು ಶಿರ್ವ ಗ್ರಾ.ಪಂ. ಆಶ್ರಯದಲ್ಲಿ ನಡೆದ ಮಹಿಳೆಯರಿಗೆ ಕಾನೂನು ಅರಿವು-ನೆರವು ಮಾಹಿತಿ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.
Related Articles
Advertisement
ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ನ್ಯಾಯವಾದಿ ವಾಣಿ ವಿ. ರಾವ್ ಮಹಿಳೆ ಮತ್ತು ಕಾನೂನು, ಹಾಗೂ ಮೇರಿ ರಂಜನಿ ಶ್ರೇಷ್ಠ ಮತ್ತು ಅಂಜಲಿನಾ ಶ್ರೇಷ್ಠ ಕೌಟುಂಬಿಕ ದೌರ್ಜನ್ಯದಿಂದ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವ ಕಾಯಿದೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ ,ಪಂಚಾಯತ್ ಕಾರ್ಯದರ್ಶಿ ಮಂಗಳಾ ಜೆ.ವಿ., ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು, ಸ್ತಿÅàಶಕ್ತಿ ಗುಂಪುಗಳ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್ ಕಾರ್ಯಕ್ರಮ ನಿರೂಪಿಸಿ, ಸಹನಾ ಕುಂದರ್ ವಂದಿಸಿದರು.