Advertisement

ಪ್ರಕೃತಿಯಲ್ಲಿ ದೈವೀಕ ಶಕ್ತಿ ಕಾಣುವುದು ಭಾರತದ ಸಂಸ್ಕೃತಿ: ಶ್ಯಾಮಲಾ ಕುಂದರ್‌

06:24 PM Oct 18, 2021 | Team Udayavani |

ಶಿರ್ವ: ಭಾರತೀಯ ಮಹಿಳೆಯರಲ್ಲಿ ವಿಶೇಷ ಶಕ್ತಿಯಿದ್ದು ,ಪ್ರಕೃತಿಯಲ್ಲಿ ದೈವೀಕ ಶಕ್ತಿಯನ್ನು ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ನಮ್ಮ ದೇಶದ ಸಂಸðತಿಯನ್ನು ವಿದೇಶಿಗರು ಪಾಲಿಸುತ್ತಿದ್ದು ನಾವೇ ಅದನ್ನು ಪಾಲಿಸಿದಾಗ ವಿಶೇಷ ಶಕ್ತಿ ಬರುತ್ತದೆ.ಮಹಿಳೆಯರು ಭಾರತೀಯ ಸಂಸðತಿ,ಸಂಸ್ಕಾರಗಳನ್ನು ಪಾಲಿಸುವ ಮೂಲಕ ಸಿಕ್ಕ ಅಧಿಕಾರ,ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಸಾಧನೆ ಮಾಡಿ ತೋರಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದರು.

Advertisement

ಅವರು ಅ. 18 ರಂದು ಶಿರ್ವ ಗ್ರಾ.ಪಂ. ಸಭಾ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ಆಯೋಗ,ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ ಮತ್ತು ಜಿ.ಪಂ. ಉಡುಪಿ,ಜಿಲ್ಲಾ ಮಕ್ಕಳ ರಕ್ಷಣೆ ಘಟಕ ಮತ್ತು ಶಿರ್ವ ಗ್ರಾ.ಪಂ. ಆಶ್ರಯದಲ್ಲಿ ನಡೆದ ಮಹಿಳೆಯರಿಗೆ ಕಾನೂನು ಅರಿವು-ನೆರವು ಮಾಹಿತಿ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.

ಮುಖ್ಯ ಅತಿಥಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಶರ್ಮಿಳಾ .ಎಸ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿಅನೇಕ ಕಾನೂನುಗಳಿದ್ದು ಅನುಷ್ಠಾನಗೊಳ್ಳಬೇಕಿದೆ.ಕಾನೂನು ಮಹಿಳೆಯರ ಆತ್ಮರಕ್ಷಣೆ ಮತ್ತು ಸ್ವಾಭಿಮಾನ ರಕ್ಷಣೆಗೆ ಸದುಪಯೋಗವಾಗಬೇಕೇ ಹೊರತು ಸಂಸಾರದ ಸಂಬಂಧ ಬಿಗಡಾಯಿಸಬಾರದು ಎಂದು ಹೇಳಿದರು.

ಶಿರ್ವ ಪೊಲೀಸ್‌ ಠಾಣಾಧಿಕಾರಿ ಶ್ರೀಶೈಲ ಮುರಗೋಡ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿಯಾವುದೇ ಕಾನೂನು ಬಾಹಿರ ಚಟುವಟಿಕೆ,ಮನೆಗಳ್ಳತನ ,ಅಕ್ರಮ ಗೋಸಾಗಾಟ,ಬ್ಯಾಂಕ್‌ ವಂಚನೆ,ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಡೆದಲ್ಲಿ ಇಆರ್‌ವಿ 112 ಗೆ ಕರೆ ಮಾಡುವಂತೆ ಮತ್ತು ಬೀಟ್‌ ಸಿಬಂದಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್‌ಮಾತನಾಡಿದರು. ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ನ್ಯಾಯವಾದಿ ವಾಣಿ ವಿ. ರಾವ್‌ ಮಹಿಳೆ ಮತ್ತು ಕಾನೂನು, ಹಾಗೂ ಮೇರಿ ರಂಜನಿ ಶ್ರೇಷ್ಠ ಮತ್ತು ಅಂಜಲಿನಾ ಶ್ರೇಷ್ಠ ಕೌಟುಂಬಿಕ ದೌರ್ಜನ್ಯದಿಂದ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವ ಕಾಯಿದೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ ,ಪಂಚಾಯತ್‌ ಕಾರ್ಯದರ್ಶಿ ಮಂಗಳಾ ಜೆ.ವಿ., ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು, ಸ್ತಿÅàಶಕ್ತಿ ಗುಂಪುಗಳ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್‌ ಕಾರ್ಯಕ್ರಮ ನಿರೂಪಿಸಿ, ಸಹನಾ ಕುಂದರ್‌ ವಂದಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next