Advertisement

ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಹೋರಾಟ

12:26 AM Jun 21, 2019 | Team Udayavani |

ಬೆಂಗಳೂರು: ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಚುನಾವಣಾಧಿಕಾರಿಗಳಿಗೆ ಸಾಕಷ್ಟು ವ್ಯವಹಾರ, ಆಸ್ತಿಯ ವಿವರಗಳನ್ನು ಮರೆಮಾಚಿ, ತಪ್ಪು ಮಾಹಿತಿಯನ್ನು ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಕೋರಿ ಹೈಕೋರ್ಟ್‌ಗೆ ಶುಕ್ರವಾರ ಅರ್ಜಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎ.ಮಂಜು ಹೇಳಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆಲ ದಾಖಲೆ ಪ್ರದರ್ಶಿಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಕಷ್ಟು ದೋಷಗಳಿವೆ. ಚುನಾವಣಾ ಆಯೋಗದ ನಿಯಮದಂತೆ ಐದು ವರ್ಷಗಳ ಆದಾಯ ತೆರಿಗೆ ಘೋಷಣೆ ವಿವರ ದಾಖಲಿಸುವುದು ಕಡ್ಡಾಯ. ಆದರೆ ಪ್ರಜ್ವಲ್ ಅವರಿಗೆ 2008ರಿಂದ ಆದಾಯವಿದ್ದರೂ ಕೇವಲ 2018-19ನೇ ಸಾಲಿನ ಆದಾಯ ತೆರಿಗೆ ವಿವರವನ್ನಷ್ಟೇ ಘೋಷಿಸಿಕೊಂಡಿದ್ದಾರೆ ಎಂದರು. ಪ್ರಜ್ವಲ್ ಅವರು ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆಗೆ ಸತ್ಯಾಂಶವನ್ನು ಮರೆಮಾಚಿ, ಅಕ್ರಮ ನಡೆಸಿರುವ ಬಗ್ಗೆ ತನಿಖೆಗೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಅವರ ಕುಟುಂಬದವರು ಬೆಂಗಳೂರು, ಮೈಸೂರು ಸುತ್ತಮುತ್ತ ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next