Advertisement

ಪಂಚಮಸಾಲಿ ಮೀಸಲಾತಿಗೆ ಕಾನೂನು ಹೋರಾಟ

09:31 PM Aug 25, 2022 | Team Udayavani |

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 2 ಎ ಮೀಸಲಾತಿ ಹಾಗೂ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕಾನೂನು ಹೋರಾಟ ಮುಂದುವರಿಸಲು ಕರ್ನಾಟಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ನಿರ್ಧರಿಸಿದೆ.

Advertisement

ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ನಿವಾಸದಲ್ಲಿ ಪಂಚಮಸಾಲಿ ಸಮುದಾಯದ ನಾಯಕರ ಸಭೆ ನಡೆಸಿ, ಮೀಸಲಾತಿಗಾಗಿ ಸಾರ್ವಜನಿಕ ಹೋರಾಟದ ಜೊತೆಗೆ ಕಾನೂನು ಹೋರಾಟ ನಡೆಸಲು ತಿರ್ಮಾನ ಮಾಡಲಾಗಿದೆ. ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘದ ಪ್ರಮುಖರಿಂದ ಸಚಿವ ಮುರುಗೇಶ್‌ ನಿರಾಣಿ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಪಂಚಮಸಾಲಿಗಳನ್ನು ಸೇರ್ಪಡೆ ಮಾಡಬೇಕು ಹಾಗೂ ರಾಜ್ಯದಲ್ಲಿ 2 ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು. ಸಭೆಯ ಬಳಿಕ ಪಂಚಮಸಾಲಿ ಸಂಘದ ಅಧ್ಯಕ್ಷ ಜಿ.ಪಿ.ಪಾಟೀಲ್‌ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ನೀಡಬೇಕು. ರಾಜ್ಯ ಸರ್ಕಾರ ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗಮನಕ್ಕೆ ತಂದಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೀಸಲಾತಿ ಸಿಗುವವರೆಗೂ ಕಾನೂನು ಹೋರಾಟ ಕೂಡ ಮುಂದುವರಿಯುತ್ತದೆ. ನಮಗೆ ಸಚಿವ ಮುರುಗೇಶ ನಿರಾಣಿ ಎಲ್ಲ ಸಹಕಾರ ಕೊಡುತ್ತಿದ್ದಾರೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next