Advertisement

ಕಾನೂನು ಅರಿವು ಅಗತ್ಯ

03:11 PM Nov 14, 2021 | Shwetha M |

ಬಸವನಬಾಗೇವಾಡಿ: ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವಿರಬೇಕು. ಅಂದಾಗ ಮಾತ್ರ ಸಮಾಜದಲ್ಲಾಗುವ ಅಪರಾಧಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಕಾಶ ಬನಸೋಡೆ ಹೇಳಿದರು.

Advertisement

ಶನಿವಾರ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಸಭಾಭವನದಲ್ಲಿ ತಾಲೂಕಾಡಳಿತ, ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ತಾಪಂ ಸಹಯೋಗದಲ್ಲಿ ನಡೆದ ಕಾನೂನು ಅರಿವು ಹಾಗೂ ಸರ್ಕಾರಿ ಯೋಜನೆಗಳ ಅನುಕೂಲತೆಗಳ ಕುರಿತು ಹಮ್ಮಿಕೊಂಡ ಮೆಗಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ನಮ್ಮ ದೇಶದ ಪರಂಪರೆ, ಸಂಸ್ಕೃತಿ ಧರ್ಮದ ಆಧಾರದ ಮೇಲೆ ರಚನೆಯಾಗಿದೆ. ಯಾರು ಕಾನೂನಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಆದರೆ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯವಾಗಿದೆ. ದೇಶದಲ್ಲಿ ಅಜ್ಞಾನದ ಕೊರತೆಯಿಂದ ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಹೀಗಾಗಿ ಹೊಸ ಹೊಸ ಕಾನೂನುಗಳು ಜಾರಿಯಾಗುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸರ್ಕಾರ 6ರಿಂದ 16 ವರ್ಷದವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣವಂತರಾಗಬೇಕು ಎಂದರು.

ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಕೋರ್ಟ್ ಗಳಲ್ಲಿ ದಾವೆ ಹೂಡಿ ಕಾನೂನು ಹೋರಾಟ ಮಾಡುವ ಬದಲು ಕಾನೂನು ಸಮಿತಿಯಿಂದ ಪ್ರತಿ ತಿಂಗಳು ನಡೆಯುವ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮಾಡಿಕೊಳ್ಳಬೇಕು. ರಾಜ್ಯ ಕಾನೂನು ಪ್ರಾಧಿಕಾರದಿಂದ ಕಾನೂನು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಪ್ರತಿಯೊಬ್ಬರೂ ಉಚಿತವಾಗಿ ಕಾನೂನು ಸಲಹೆ ಹಾಗೂ ಸೇವೆಯನ್ನು ಪಡೆಯಬಹುದಾಗಿದೆ ಎಂದರು.

ಸಿವಿಲ್‌ ನ್ಯಾಯಾಧೀಶ ಸಂದೀಪ ನಾಯಿಕ ಮಾತನಾಡಿ, ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾನೂನು ಸೇವಾ ಸಮಿತಿಯಿಂದ ಸರ್ಕಾರಿ ಯೋಜನೆಗಳ ಕುರಿತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರೂ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದರು.

Advertisement

ವಕೀಲ ರವಿ ರಾಠೊಡ ಉಪನ್ಯಾಸ ನೀಡಿದರು. ಇದೇ ಸಂಧರ್ಭದಲ್ಲಿ ಪಿಂಚಣಿ ಮಂಜೂರಾತಿಯಾದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಯಿತು. ಗೇಡ್‌-2 ತಹಶೀಲ್ದಾರ್‌ ಪಿ.ಜೆ.ಪವಾರ, ವಕೀಲರ ಸಂಘದ ಅಧ್ಯಕ್ಷ ಎನ್‌.ಎಸ್‌.ಪಾಟೀಲ, ಜಿ.ಆರ್‌ .ಬೀಳಗಿ, ವಿಜಯ ಕಲ್ಲೂರ, ಸಿಡಿಪಿಒ ಸಂತೋಷ ಮ್ಯಾಗೇರಿ ಇದ್ದರು. ವೀರೇಶ ಗುಡಲಮನಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next