Advertisement

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

11:22 AM Dec 26, 2024 | Team Udayavani |

ಕೋಝಿಕ್ಕೋಡ್: ಹಿರಿಯ ಮಲಯಾಳಂ ಸಾಹಿತಿ,  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ಅವರು ಬುಧವಾರ(ಡಿ.25) ತಡರಾತ್ರಿ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

Advertisement

ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ತಡರಾತ್ರಿ ಸುಮಾರು 10 ಗಂಟೆಗೆ ನಿಧನಹೊಂದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಅಗಲಿದ ಎಂಟಿ ವಾಸುದೇವನ್ ನಾಯರ್ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಡಿ. 26 ಮತ್ತು 27 ರಂದು ಅಧಿಕೃತ ಶೋಕಾಚರಣೆ ಘೋಷಿಸಿದೆ.ಡಿಸೆಂಬರ್ 26ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ. ಇಂದು (ಡಿ. 26)ರಂದು ಸಂಜೆ 5 ಗಂಟೆಗೆ ಮಾವೂರು ಸಾರ್ವಜನಿಕ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.

ಕಾದಂಬರಿ, ಸಣ್ಣ ಕಥೆ, ಚಿತ್ರಕಥೆ, ನಾಟಕ, ಮಕ್ಕಳ ಸಾಹಿತ್ಯ, ಪ್ರವಾಸ ಕಥನ, ಲೇಖನ ಹೀಗೆ ಬರವಣಿಗೆಯ ಎಲ್ಲ ಪ್ರಕಾರಗಳಲ್ಲೂ ತಮ್ಮ ಛಾಪು ಮೂಡಿಸಿರುವ ಎಂ.ಟಿ.ಯವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಿರ್ಮಾಲ್ಯಂ ಸೇರಿದಂತೆ 6 ಚಲನಚಿತ್ರಗಳು ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ, ಇದು ಮಲಯಾಳಂ ಚಿತ್ರರಂಗದ ಶ್ರೇಷ್ಠತೆಗಳಲ್ಲಿ ಒಂದಾಗಿದೆ. ಇವರ ಸೇವೆಗೆ 2005ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಅಷ್ಟು ಮಾತ್ರವಲ್ಲದೆ ಜ್ಞಾನಪೀಠ, ಎಜುತಚ್ಚನ್ ಪ್ರಶಸ್ತಿ, ವಯಲಾರ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಲ್ಲತ್ತೋಳ್ ಪ್ರಶಸ್ತಿ, ಜೆ.ಸಿ. ಅವರು ಡೇನಿಯಲ್ ಪ್ರಶಸ್ತಿ ಸೇರಿದಂತೆ ಲೆಕ್ಕವಿಲ್ಲದಷ್ಟು ಗೌರವಗಳನ್ನು ಇವರು ಪಡೆದುಕೊಂಡಿದ್ದಾರೆ. ಅವರು ನಾಲ್ಕು ಬಾರಿ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು 11 ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಮೂರು ಬಾರಿ ಅತ್ಯುತ್ತಮ ನಿರ್ದೇಶಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದರು.

Advertisement

ಮೃತರು ಪತ್ನಿ ಕಲಾಮಂಡಲಂ ಸರಸ್ವತಿ ಹಾಗೂ ಮಕ್ಕಳಾದ ಸಿತಾರಾ, ಅಶ್ವತಿಯನ್ನು ಅಗಲಿದ್ದಾರೆ. ಎಂಟಿ ಅವರು 1965ರಲ್ಲಿ ಪ್ರಮೀಳಾ ಅವರನ್ನು ಮೊದಲು ವಿವಾಹವಾಗಿದ್ದರು. ಸಿತಾರಾ ಮೊದಲ ಪತ್ನಿಯ ಪುತ್ರಿ. ನಂತರ 1977ರಲ್ಲಿ ಎಂಟಿ ಅವರು ಕಲಾಮಂಡಲಂ ಸರಸ್ವತಿ ಅವರನ್ನು ವಿವಾಹವಾಗಿದ್ದರು.

ಎಂಟಿ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next