Advertisement

ಹಾಡು ನಿಲ್ಲಿಸಿದ ಗಾನಕೋಗಿಲೆ…! ದಿಗ್ಗಜ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಇನ್ನಿಲ್ಲ

09:49 AM Feb 06, 2022 | Team Udayavani |

ಮುಂಬೈ: ದಿಗ್ಗಜ ಗಾಯಕಿ, ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆ ಫಲಕಾರಿಯಾಗಿದೆ ಇಂದು ನಿಧನರಾದರು.

Advertisement

ಜನವರಿ 8 ರಂದು ಕೋವಿಡ್ -19 ಪಾಸಿಟಿವ್ ಆದ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ವಾರಗಳಿಂದ ಆಕೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಸುಧಾರಣೆಯ ಲಕ್ಷಣಗಳನ್ನು ತೋರಿಸಿದ ನಂತರ, ಆಕೆಯ ಆರೋಗ್ಯ ಸ್ಥಿತಿಯು ಹದಗೆಟ್ಟಿತು. ದುರದೃಷ್ಟವಶಾತ್ ಅವರು ಇಂದು ಇಹಲೋಕ ತ್ಯಜಿಸಿದ್ದು, ಇಡೀ ದೇಶವೇ ದುಃಖದಲ್ಲಿ ಮುಳುಗಿದೆ.

ಲತಾ ಮಂಗೇಶ್ಕರ್ ಅವರು ಹಿನ್ನೆಲೆ ಗಾಯನದ ಏಳು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ, ‘ಆಯ್ ಮೇರೆ ವತನ್ ಕೆ ಲೋಗೋ’, ‘ಲಗ್ ಜಾ ಗಲೇ’, ‘ಯೇ ಕಹಾನ್ ಆಗೇ ಹೈ ಹಮ್’ ಮತ್ತು ‘ಪ್ಯಾರ್ ಕಿಯಾ ತೊ ಡರ್ನಾ ಕ್ಯಾ’ ಮುಂತಾದ ಎಂದೂ ಮರೆಯದ ಹಾಡುಗಳನ್ನು ನೀಡಿದವರು. ಅವರ ಅಸಾಧಾರಣ ಪ್ರತಿಭೆಗಾಗಿ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿಗಳು ಅರಸಿದೆ.

Advertisement

Udayavani is now on Telegram. Click here to join our channel and stay updated with the latest news.

Next