ಬೆಂಗಳೂರು: ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯು ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರರು ಭಾಗವಹಿಸಿದ್ದರು.
ಸುಗಮ ಕಲಾಪ ನಡೆಸುವ ಸ್ಪೀಕರ್ ಅಭಿಪ್ರಾಯಕ್ಕೆ ಪ್ರತಿಪಕ್ಷದಿಂದ ಸಹಮತ ಸಿಗಲಿಲ್ಲ. ಕಳೆದ ಬಾರಿ ಸದನ ಸಮಿತಿ ಸಭೆಯಲ್ಲಿ ಕೊಟ್ಟ ಭರವಸೆಯಂತೆ ಸ್ಪೀಕರ್ ನಡೆದುಕೊಂಡಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಅಸಮಾಧಾನ ಹೊರ ಹಾಕಿದರು.
ಇದನ್ನೂ ಓದಿ:ಎಲ್‌ಐಸಿ ಷೇರುಗಳ ಮಾರಾಟ ಪ್ರಕ್ರಿಯೆ: ಲಾಭ ಹಂಚಿಕೆ ನಿಯಮ ತಿದುಪಡಿಗೆ ಚಿಂತನೆ
ಕಳೆದ ಬಾರಿ ಏಕಾಏಕಿ ವಿಧೇಯಕ ಮಂಡನೆಗೆ ಅವಕಾಶ ಕೊಟ್ಟಿದ್ದ ಸ್ಪೀಕರ್ ಮೇಲೆ ಕಾಂಗ್ರೆಸ್ ನಾಯಕರ ಬೇಸರ ವ್ಯಕ್ತಪಡಿಸಿದರು. ಈ ಬಾರಿ ನಮ್ಮ ಹೋರಾಟ ಮುಂದುವರಿಯಲಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಸುಗಮ ಕಲಾಪಕ್ಕೆ ಆಡಳಿತ ಪಕ್ಷದ ನಾಯಕರು ಕಾಂಗ್ರೆಸ್ ನಾಯಕರ ಸಹಕಾರ ಕೋರಿದರು. ಇದಕ್ಕೆ ಜ್ವಲಂತ ಸಮಸ್ಯೆಗಳು ಮತ್ತು ಜನಪರ ವಿಧೇಯಕಗಳ ಚರ್ಚೆಗೆ ಮಾತ್ರ ಸಹಕಾರ ನೀಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದರು.