Advertisement

Legislative Assembly; ಸಿಎಂ ರಾಜೀನಾಮೆ ನೀಡಲಿ: ಅಶೋಕ್‌

12:27 AM Jul 17, 2024 | Team Udayavani |

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರಕಾರಕ್ಕೆ ತಟ್ಟಬಾರದೆಂದರೆ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವ ಜತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

Advertisement

ವಾಲ್ಮೀಕಿ ಹಗರಣದ ಬಗ್ಗೆ ನಿಯಮ 69ರ ಅಡಿ ಚರ್ಚೆ ಪ್ರಾರಂಭಿಸಿ ಸತತ 3 ಗಂಟೆ ಕಾಲ ಮಾತನಾಡಿ, ಈ ಪ್ರಕರಣದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಹಗರಣವಾ ಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೂಬ್ಬರ ಮೇಲೆ ತಪ್ಪು ಹೊರಿಸಿದ್ದಾರೆ. ಇದು ಹೊಣೆ ಇಲ್ಲದ ಸರಕಾರ ಎಂದರು.

ಎರಡು ಖಾತೆ ತೆರೆಯಬಾರದು ಎಂದು ಸರಕಾರವೇ ಮಾಡಿದ ಆದೇಶವನ್ನು ಉಲ್ಲಂ ಸಲಾಗಿದೆ. ಕಳ್ಳತನ ಆಗಿರುವುದು 187 ಕೋಟಿ ರೂ. ಹೀಗಿರುವಾಗ ಸಿಎಂ ಅದನ್ನು 89 ಕೋಟಿ ರೂ. ಎನ್ನಲು ಸಾಧ್ಯವಿಲ್ಲ. ಇದಕ್ಕಾ
ಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯ
ವರು ತಮಗೆ ಗೊತ್ತಿರಲಿಲ್ಲ ಎಂದರೂ ಅದು ದೊಡ್ಡ ತಪ್ಪು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ. ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೂ ವಿಶೇಷ ತನಿಖಾ ದಳ ರಚಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. ಸಿಬಿಐ ತನಿಖೆಯಾದರೆ 2 ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫ‌ಲವಾಗಿದೆ ಎಂದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರಕಾರ ನೇಮಿಸಿದ್ದು ಇಲ್ಲಿ ತಾರತಮ್ಯವಾಗುತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next