Advertisement

Legislative Assembly: ಸಿನಿ ಕಾರ್ಮಿಕರಿಗೆ ಭದ್ರತೆ ಸೇರಿ 3 ಮಸೂದೆ ಮಂಡನೆ

11:35 PM Jul 19, 2024 | Team Udayavani |

ಬೆಂಗಳೂರು: ಚಿತ್ರಮಂದಿರಗಳು ಮಾರಾಟ ಮಾಡುವ ಟಿಕೆಟ್‌ ದರದ ಶೇ. 1 ರಿಂದ 2ರಷ್ಟು ಉಪಕರ ಸಂಗ್ರಹಿಸಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಅನುಕೂಲವಾಗುವಂತೆ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಸೇರಿ ಮೂರು ಮಸೂದೆಗಳು ಶುಕ್ರವಾರ ವಿಧಾನಸಭೆಯಲ್ಲಿ ಮಂಡನೆಯಾದವು.

Advertisement

ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಿ, ಅದರ ಮೂಲಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರನ್ನು ನೋಂದಣಿ ಮಾಡಿಸಿ, ಅವರಿಗೆಲ್ಲ ಗುರುತಿನ ಚೀಟಿ ಕೊಟ್ಟು, ಆರೋಗ್ಯ ವಿಮೆ, ಜೀವವಿಮೆ ಮತ್ತಿತರ ಸಾಮಾಜಿಕ ಭದ್ರತೆ ನೀಡುವ ಅಂಶವನ್ನು ಈ ಮಸೂದೆಯಲ್ಲಿ ಅಡಕಗೊಳಿಸಲಾಗಿದೆ.

ಅದೇ ರೀತಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ-1 ಕೆ.ಗೋವಿಂದರಾಜು, ರಾಜಕೀಯ ಕಾರ್ಯದರ್ಶಿ-2 ನಸೀರ್‌ ಅಹ್ಮದ್‌, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ನೀತಿ ಮತ್ತು ಯೋಜನಾ ಸಲಹೆಗಾರರು, ರಾಜ್ಯ ನೀತಿ ಮತ್ತು ಯೋಜನ ಆಯೋಗದ ಉಪಾಧ್ಯಕ್ಷರ ರಕ್ಷಣೆಗಾಗಿ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣ) (ಎರಡನೇ ತಿದ್ದುಪಡಿ) ಮಸೂದೆ ಮಂಡಿಸಿದ್ದು ತಂಬಾಕು ಉತ್ಪನ್ನ ಮತ್ತು ಪಾನ್‌ ಮಸಾಲಾ ಉತ್ಪಾದನೆಯಲ್ಲಿ ಬಳಸುವ ಯಂತ್ರಗಳ ನೋಂದಣಿ ಮಾಡದಿದ್ದರೆ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಹಾಗೂ ಯಂತ್ರವನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾವಿರುವ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಮಸೂದೆಯನ್ನೂ ಮಂಡನೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next