Advertisement

Legislative Council Election; 5 ಕ್ಷೇತ್ರದ 76 ಅಭ್ಯರ್ಥಿಗಳ ನಾಮಪತ್ರ ಸಿಂಧು

08:17 PM May 17, 2024 | Team Udayavani |

ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಲ್ಲಿಸಲಾದ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆದಿದ್ದು ತಾಂತ್ರಿಕ ಕಾರಣಗಳಿಂದಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ. ಹೀಗಾಗಿ 5 ಕ್ಷೇತ್ರಗಳ 76 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ.

Advertisement

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 41 ನಾಮಪತ್ರಗಳ ಪೈಕಿ 7 ನಾಮಪತ್ರಗಳು ತಿರಸ್ಕೃತಗೊಂಡಿದ್ದು 26 ಅಭ್ಯರ್ಥಿಗಳ 34 ನಾಮಪತ್ರ ಅಂಗೀಕರಿಸಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳ 34 ನಾಮಪತ್ರಗಳಲ್ಲಿ 11 ತಿರಸ್ಕಾರಗೊಂಡಿದ್ದು 16 ಅಭ್ಯರ್ಥಿಗಳ 23 ನಾಮಪತ್ರಗಳು ಪುರಸ್ಕೃತಗೊಂಡಿವೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳ 18 ನಾಮಪತ್ರಗಳ ಪೈಕಿ 1 ತಿರಸ್ಕರಿಸಲಾಗಿದ್ದು 9 ಅಭ್ಯರ್ಥಿಗಳ 17 ನಾಮಪತ್ರಗಳು ಪುರಸ್ಕೃತಗೊಂಡಿವೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳ 22 ನಾಮಪತ್ರಗಳ ಪೈಕಿ ಯಾವುದೇ ನಾಮಪತ್ರ ತಿರಸ್ಕಾರಗೊಂಡಿಲ್ಲ. 12 ಅಭ್ಯರ್ಥಿಗಳ ಎಲ್ಲÉ 22 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳ ಎಲ್ಲ 19 ನಾಮಪತ್ರಗಳು ಅಂಗೀಕಾರಗೊಂಡಿದ್ದು ಯಾವುದೇ ನಾಮಪತ್ರ ತಿರಸ್ಕೃತಗೊಂಡಿಲ್ಲ.

ಚುನಾವಣೆ ನಡೆಯಲಿರುವ ಆರು ಕ್ಷೇತ್ರಗಳಲ್ಲಿ 103 ಅಭ್ಯರ್ಥಿಗಳಿಂದ 156 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಶುಕ್ರವಾರ ನಡೆದ ಐದು ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆಯಲ್ಲಿ ಒಟ್ಟು 76 ಅಭ್ಯರ್ಥಿಗಳ 115 ನಾಮಪತ್ರಗಳನ್ನು ಸಿಂಧು ಎಂದು ಘೋಷಿಸಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದರು. ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಕೆಲವು ದಾಖಲೆ ಸಲ್ಲಿಸಲು ಕಾಲಾವಕಾಶ ಕೇಳಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಮಪತ್ರಗಳ ಪರಿಶೀಲನೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next