Advertisement

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

03:41 PM May 27, 2022 | Team Udayavani |

ಬೆಂಗಳೂರು: ನಿರೀಕ್ಷೆಯೆಂತೆ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಯ್ಕೆಯಾಗುವ ಕಾರಣದಿಂದ ಯಾವುದೇ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.

Advertisement

ಒಟ್ಟು ಏಳು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ, ಎರಡು ಸ್ಥಾನ ಕಾಂಗ್ರೆಸ್ ಗೆ ಮತ್ತು ಒಂದು ಸ್ಥಾನ ಜೆಡಿಎಸ್ ಪಾಲಾಗಿದೆ. ಬಿಜೆಪಿಯಿಂದ ಚಲವಾದಿ ನಾರಯಣ ಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವಪ್ರಸಾದ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಗರಾಜ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:ಅಕ್ರಮ ಆಸ್ತಿ ಗಳಿಕೆ: ಹರಿಯಾಣ ಮಾಜಿ ಸಿಎಂ ಚೌಟಾಲಾಗೆ 4 ವರ್ಷಗಳ ಜೈಲು

ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದರು

Advertisement

Udayavani is now on Telegram. Click here to join our channel and stay updated with the latest news.

Next