Advertisement

ವಿಧಾನ ಪರಿಷತ್‌ ಚುನಾವಣೆ: ಐದು ನಾಮಪತ್ರ ಸಲ್ಲಿಕೆ

06:55 AM Sep 25, 2018 | |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಒಟ್ಟು ಐದು ನಾಮಪತ್ರಗಳು ಸಲ್ಲಿಕೆಯಾಗಿವೆ. ಒಂದು ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದೆ.

Advertisement

ಉಳಿದೆರಡು ಸ್ಥಾನಗಳಿಗೆ ತಲಾ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಜಂಟಿ ಕಾರ್ಯದರ್ಶಿ ಎಂ.ಎಸ್‌.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು,ಅಗತ್ಯ ಬಿದ್ದರೆ ಅ.3ರಂದು ಮತದಾನ ನಡೆಯಲಿದೆ.

ಕೆ.ಎಸ್‌.ಈಶ್ವರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್‌ನ ನಸೀರ್‌ ಅಹಮದ್‌ ಮತ್ತು ಹರಿಶ್ಚಂದ್ರಗೌಡ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಂದ ತೆರವಾದ ಸ್ಥಾನಕ್ಕೆ ಎಂ.ಸಿ.ವೇಣುಗೋಪಾಲ್‌ ಮತ್ತು ಶಾಸಕ ವಿ.ಸೋಮಣ್ಣ ಸ್ಥಾನಕ್ಕೆ ಜೆಡಿಎಸ್‌ನಿಂದ ರಮೇಶ್‌ ಗೌಡ ಮತ್ತು ಪಕ್ಷೇತರ ಅಭ್ಯರ್ಥಿ ವೆಂಕಟೇಶ್ವರ ಮಹಾಸ್ವಾಮೀಜಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next