Advertisement

ಜೂ. 3: ವಿಧಾನ ಪರಿಷತ್‌ 7 ಸ್ಥಾನಗಳಿಗೆ ಚುನಾವಣೆ

02:15 AM May 11, 2022 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯನ್ನು ಜೂ. 3ರಂದು ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Advertisement

ಕಾಂಗ್ರೆಸ್‌ನ ಮೂವರು, ಬಿಜೆಪಿ ಮತ್ತು ಜೆಡಿಎಸ್‌ನ ತಲಾ ಇಬ್ಬರು ಸದಸ್ಯರ ಅವಧಿ ಜೂ. 14ರಂದು ಕೊನೆಗೊಳ್ಳಲಿದೆ. ಈ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಮೇ 17ರಂದು ಚುನಾವಣ ಅಧಿ ಸೂಚನೆ ಹೊರ ಬೀಳಲಿದೆ. ನಾಮಪತ್ರ ಸಲ್ಲಿಸಲು ಮೇ 24 ಕೊನೇ ದಿನ, ಮೇ 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 27ರಂದು ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ. ಜೂ. 3ರಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಅಂದೇ ಫ‌ಲಿತಾಂಶ ಹೊರಬೀಳಲಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next