Advertisement
2 ಸ್ಥಾನ ಗೆಲ್ಲುವ ಅವಕಾಶ:2 ಡಜನ್ ಆಕಾಂಕ್ಷಿಗಳು
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನ ಗೆಲ್ಲುವ ಅವಕಾಶವಿದ್ದು ಎರಡು ಡಜನ್ ಆಕಾಂಕ್ಷಿಗಳು ಕಾಯುತ್ತಿದ್ದಾರೆ. ಪ್ರಮುಖ ವಾಗಿ ಮಾಜಿ ಸಭಾಪತಿಗಳಾದ ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಪುಷ್ಪಾ ಅಮರನಾಥ್, ಎಸ್.ಎ. ಹುಸೇನ್, ನಿವೇದಿತ್ ಆಳ್ವ, ಮನ್ಸೂರ್ ಅಲಿ ಖಾನ್, ಮಾಜಿ ಮೇಯರ್ ರಾಮಚಂದ್ರಪ್ಪ ಹೀಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಜತೆಗೆ, ಪ್ರಸ್ತುತ ನಿವೃತ್ತಿಯಾಗುತ್ತಿರುವ ಆರ್.ಬಿ. ತಿಮ್ಮಾಪುರ್, ವೀಣಾ ಅಚ್ಚಯ್ಯ, ಅಲ್ಲಂ ವೀರಭದ್ರಪ್ಪ ಅವರೂ ಮತ್ತೂಂದು ಅವಧಿಗೆ ಮುಂದುವರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಒಂದು ಸ್ಥಾನ ಸಿಗುವ ಅವಕಾಶ ಇದ್ದು ಹಾಲಿ ಸದಸ್ಯ ರಮೇಶ್ ಗೌಡ ಮುಂದುವರಿಯಲು ಬಯಸಿದ್ದು, ಟಿ.ಎ. ಶರವಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆಯೇ ಪಕ್ಷದ ನಾಯಕರು ಇವರಿಗೆ ಆಶ್ವಾಸನೆ ನೀಡಿದ್ದರು ಎಂದು ಹೇಳಲಾಗಿದೆ. ಇದರ ನಡುವೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸೇರಿರುವ ಸಿ.ಎಂ. ಇಬ್ರಾಹಿಂ, ರಾಜ್ಯ ಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೆಸರು ಕೇಳಿಬರುತ್ತಿದೆ. ನಿಷ್ಠ ಕಾರ್ಯಕರ್ತರಿಗೆ ಮಣೆ?
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿಯಲ್ಲಿ ಹಲವರು ಕಣ್ಣಿಟ್ಟಿದ್ದು, ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕಲ್ಪಿಸುವ ಬಗ್ಗೆ ಆಲೋಚನೆ ನಡೆಸಿದೆ.
Related Articles
Advertisement
ಆಕಾಂಕ್ಷಿಗಳ ಕಣ್ಣುಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನಾ, ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಜಗದೀಶ್ ಹಿರೇಮನಿ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.