Advertisement

ಮುಂದಿನ ಸಿಎಂ ಬಿಜೆಪಿಯವರೇ

05:06 PM Oct 25, 2022 | Team Udayavani |

ಶಿರಾ: ನಾನು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷಕ್ಕೆ ನಿಷ್ಠನಾಗಿದ್ದದು, ಅದರಲ್ಲಿ ಯಾವುದೇ ಸಂದೇಹ ಬೇಡ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕೂಡ ಬಿಜೆಪಿ ಪಕ್ಷದವರೇ ಆಗಲಿದ್ದಾರೆ ‌ಎಂದು ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಹೇಳಿದರು.

Advertisement

ನಗರದ ‌ಸೇವಾ ಸದನ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಕ್ಕಹುಲಿಕುಂಟೆ ಗ್ರಾಮದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ ಹಾಗೂ ಕುಂಚಿಟಿಗ ಒಕ್ಕಲಿಗ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿ, ಕುಂಚಿಟಿಗ ಸಮುದಾಯಕ್ಕೆ ಒಬಿಸಿ ವಂಚನೆಯಾಗಿದೆ. ಒಕ್ಕಲಿಗರ ಉಪಜಾತಿಯಾಗಿ ರಾಜ್ಯದಲ್ಲಿ ಒಬಿಸಿ ಸೌಲಭ್ಯ ಇದೆ. ಆದರೆ, ಕೇಂದ್ರದ ಪಟ್ಟಿಯಲ್ಲಿ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೇ ಆದರೂ ಸಹ ಒಬಿಸಿ ಮೀಸಲಾತಿ ಕೊಡಿಸಬೇಕು ಎಂಬ ಮಾತನ್ನು ಹೇಳಿದ್ದೇನೆ. ಆದರೆ ಕೆಲವು ಮಾಧ್ಯಮಗಳಲ್ಲಿ ಎಚ್‌. ಡಿ.ಕುಮಾರಸ್ವಾಮಿಯವರು ಮುಖ್ಯ ಮಂತ್ರಿಯಾದರೆ ನನಗೆ ಸಂತೋಷ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರು ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಯವರು ಉತ್ತಮ ಆಡಳಿತ ನೀಡುತ್ತಿ ದ್ದಾರೆ. ಇಂತಹ ಸಂದರ್ಭದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದರು.

ನ.11 ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. 23 ಎಕರೆಯಲ್ಲಿ ಕೆಂಪೇಗೌಡ ಅವರ ಜೀವನ ಚರಿತ್ರೆ ಹಾಗೂ ಸಾಧನೆಗಳ ಮ್ಯೂಸಿಯಂ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಡಿಯೂರಪ್ಪ ಅವರು ಶಿಕಾರಿಪುರ ಕಾರ್ಯಕ್ರಮದಲ್ಲಿ ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಕೊಡಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದೇವೆ. ಯಾವುದೇ ಗೊಂದಲಕ್ಕೆ ಯಾರೂ ಕಿವಿಗೊಡಬೇಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next