Advertisement
ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣ ನಡೆದ ಸಂದರ್ಭದಲ್ಲಿ ಅಲ್ಲಿದ್ದವರನ್ನು ಕರೆಸಿ ಸ್ಥಳ ಮಹಜರು ಮಾಡುತ್ತಾರೋ, ಖಾಲಿ ಸ್ಥಳದಲ್ಲಿ ಮಹಜರು ಮಾಡುತ್ತಾರೋ ಎಂಬುದು ಮೊದಲು ನಮಗೆ ಗೊತ್ತಾಗಬೇಕು. ಅನಂತರ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು. ಈ ಕುರಿತು ಪರಿಷತ್ ಕಾರ್ಯದರ್ಶಿಗಳು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದರು.
Related Articles
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮೇಲ್ಮನೆ ಸದಸ್ಯ ಸಿ.ಟಿ.ರವಿ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸಲು ಅವಕಾಶ ಹಾಗೂ ಸಹಕಾರ ನೀಡುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸಿಐಡಿ ಅಧಿಕಾರಿಗಳು ಪತ್ರ ಬರೆದಿದ್ದು, ಉತ್ತರಕ್ಕಾಗಿ ಕಾದಿದ್ದಾರೆ.
Advertisement
ಸೋಮವಾರವಷ್ಟೇ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ಪತ್ರ ತಲುಪಿದ್ದು, ಅವರು ಪತ್ರಕ್ಕೆ ಸಂಬಂಧಿಸಿ ಯಾವುದೇ ಉತ್ತರವನ್ನು ನೀಡಿಲ್ಲ. ಸದನದೊಳಗೆ ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಕರಣಕ್ಕೆ ಸಂಬಂಧಿಸಿ ಆದೇಶ ನೀಡಿ ಆಗಿದ್ದು, ಸಿಐಡಿ ಅಧಿಕಾರಿಗಳ ಪ್ರವೇಶಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂಬುದನ್ನೂ ಸಭಾಪತಿ ಅವರ ಅನುಮತಿ ಮೇರೆಗೆ ನಿರ್ಧರಿಸಲು ಚಿಂತನೆ ನಡೆಸಿದ್ದಾರೆ.
ಸಚಿವೆ ಹೆಬ್ಬಾಳ್ಕರ್ ಅವರು ಸಿ.ಟಿ. ರವಿ ವಿರುದ್ಧ ನೀಡಿದ್ದ ದೂರು ಆಧರಿಸಿ ಬಾಗೇವಾಡಿ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಸರಕಾರದ ಆದೇಶದ ಮೇರೆಗೆ ಸಿಐಡಿಗೆ ಹಸ್ತಾಂತರಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಪರಿಷತ್ ಸಭಾಂಗಣದ ಒಳಗೆ ಘಟನೆ ನಡೆದಿರುವುದರಿಂದ ಮುಂದಿನ ತನಿಖೆಗಾಗಿ ಸಿಐಡಿ ಅಧಿಕಾರಿಗಳು ಪರಿಷತ್ ಸಭಾಪತಿಯ ಸಹಕಾರ ಮತ್ತು ಅವಕಾಶ ಕೋರಿದ್ದಾರೆ.