Advertisement

ವಿಧಾನ ಪರಿಷತ್ ನಲ್ಲಿ ಮುಂದುವರಿದ ಗದ್ದಲ: ಸದನದ ಸಮಿತಿ ರಚಿಸಲು ಪ್ರತಿಪಕ್ಷ ಪಟ್ಟು

12:19 PM Mar 22, 2021 | Team Udayavani |

ವಿಧಾನ ಪರಿಷತ್: ರಾಜ್ಯದ ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿರುವುದರಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ತನಿಖೆಗೆ ಸದನ ಸಮಿತಿ ರಚಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಧರಣಿ ಮುಂದುವರಿಸಿದೆ.

Advertisement

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ಸದನ ಸಮಿತಿ ರಚಿಸಲೇ ಬೇಕು ಎಂದು ಪಟ್ಟು ಹಿಡಿದರು.

ಇದನ್ನೂ ಓದಿ:ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡುವುದಿಲ್ಲ: ಬಿ.ಸಿ.ಪಾಟೀಲ್

ಈ ವೇಳೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಮತ್ತು ಜೆಡಿಎಸ್ ನಾಯಕರ ಜೊತೆ ಸಭೆ ನಡೆಸಿ ಸಹಮತಕ್ಕೆ‌ ಬರಲು ಚರ್ಚೆಗೆ ಆಹ್ವಾನಿಸಿದರು. ಹೀಗಾಗಿ ಸಭೆಯನ್ನು 10 ನಿಮಿಷ ಮುಂದೂಡುವುದಾಗಿ ಪ್ರಕಟಿಸಿದರು.

ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪೀಠದ ಮುಂಭಾಗದಲ್ಲಿ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಸದನ ಸಮಿತಿ ರಚಿಸಲೇಬೇಕು ಎಂದು ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಆಗ್ರಹಿಸಿದರು.

Advertisement

ಇದನ್ನೂ ಓದಿ: ಸರ್ಕಾರ ಬೀಳಿಸಿ ಬಾಂಬೆಗೆ ಹೋಗಿದ್ದೇ ಸಿ.ಡಿ ಆಗಲು ಕಾರಣ: ಕುಮಾರಸ್ವಾಮಿ

ತಜ್ಞರ ಸಮಿತಿಯಿಂದ ತನಿಖೆ ನಡೆಸಲಾಗುವುದು. ಭ್ರಷ್ಟಾಚಾರ ನಡೆದಿರುವುದಕ್ಕೆ ದಾಖಲೆ ನೀಡಲಿ. ಲೋಪ ಎಲ್ಲಿ ಆಗಿದೆ ಎಂದು ಹೇಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ‌ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಜೆಡಿಎಸ್ ಸದಸ್ಯರ ಬೇಡಿಕೆಯನ್ನು ಬೆಂಬಲಿಸಿದರು. ಸರ್ಕಾರ ಪ್ರತಿಷ್ಟೆಯಾಗಿ ತೆಗೆದುಕೊಳ್ಳದೆ ಸದನ ಸಮಿತಿ ರಚಿಸುವಂತೆ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next